
Karnataka CM Siddaramaiah | The myth that if you visit Chamarajanagar you will lose your power is gone now
ಚಾಮರಾಜನಗರ (ಹನೂರು):
ಚಾಮರಾಜನಗರ ಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ಈಗ ಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಶ್ರೀ ಮಲೈ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರಿಗೆ ಇಂದು ಪ್ರತಿಕ್ರಿಯೆ ನೀಡಿದರು.
ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ. ಅದಕ್ಕಾಗಿಯೇ ಹಿಂದೆ ಮುಖ್ಯಮಂತ್ರಿ ಯಾದ ಕೂಡಲೇ ಚಾಮರಾಜನಗರಕ್ಕೆ ಭೇಟಿ ನೀಡಿದೆ. ಸುಮಾರು 12 ಬಾರಿ ಭೇಟಿ ನೀಡಿದ್ದು, 5 ವರ್ಷ ಗಟ್ಟಿಯಾಗಿ ಇದ್ದೆ. ಚಾಮರಾಜನಗರ ಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ಈಗ ಹೋಗಿದೆ ಎಂದರು.