
Representational Image: Karnataka CM Siddaramaiah
ಬೆಂಗಳೂರು:
ಇಂದು 12 ಗಂಟೆಗೆ ಸಿಎಂ ಸಿದ್ದರಾಮಯ್ಯ 14ನೇ ಬಜೆಟ್ ಮಂಡಸಲಿದ್ದು, ಈ ಮೂಲಕ ರಾಜ್ಯದ ಇತಿಹಾಸದಲ್ಲಿಯೇ ಅತೀ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಲಿದ್ದಾರೆ.
ಚುನಾವಣಾ ಪೂರ್ವ ಭರವಸೆಯಂತೆ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಸೇರಿದಂತೆ 5 ಗ್ಯಾರಂಟಿ ಕಾರ್ಯಕ್ರಮಗಳ ಜಾರಿಗೆ ಸರಕಾರ ಸಿದ್ಧತೆ ಮಾಡಿಕೊಂಡಿದೆ. ಇದಕ್ಕೆ ಅಗತ್ಯ ಅನುದಾನವನ್ನು ಬಜೆಟ್‌ನಲ್ಲಿ ಹಂಚಿಕೆ ಮಾಡಲಾಗುತ್ತದೆ.
ಸಿಎಂ ಸಿದ್ದರಾಮಯ್ಯ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ದೂರದೃಷ್ಟಿ ಆಲೋಚನೆಗಳನ್ನು ಕ್ರೂಢೀಕರಿಸಿ, ಮಹತ್ವದ ಬಜೆಟ್ ಮಂಡಿಸಲು ಈಗಾಗಲೇ ಎಲ್ಲ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಜೆಟ್ ಮಂಡನೆಗೆ ಅಂತಿಮ ರೂಪ ಕೊಟ್ಟಿದ್ದಾರೆ. ಮುಖ್ಯವಾಗಿ ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವ ಧನ ಹೆಚ್ಚಿಸುವ ಸಾಧ್ಯತೆಯಿದೆ.