
ಬೆಂಗಳೂರು:
ಇಂದು ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿ ಹಿನ್ನೆಲೆ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.
“ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ.
ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂಥದ್ದೊಂದು ಅಸಾಧಾರಣ ಸಾಧನೆಗೈದ ನಾಡಿನ ವಿಜ್ಞಾನಿಗಳಿಗೆ ಅಭಿನಂದನೆಗಳು,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.
ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ.
— CM of Karnataka (@CMofKarnataka) August 23, 2023
ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ.
ಇಂಥದ್ದೊಂದು… pic.twitter.com/TQMzAHF5r9