Home ಬೆಂಗಳೂರು ನಗರ ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ

ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ

45
0
Karnataka CM to visit Covid-19 infected border districts
ಮೈಸೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿನ ಶಿವಳ್ಳಿ ರೆಸ್ಟೋರೆಂಟ್ ನಲ್ಲಿ ಇಂದು ಬೆಳಗಿನ ಉಪಹಾರ ಸೇವಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಮುರುಗೇಶ್ ನಿರಾಣಿ, ಡಾ. ಕೆ. ಸುಧಾಕರ, ಎಸ್ ಟಿ ಸೋಮಶೇಖರ, ಬೈರತಿ ಬಸವರಾಜ, ಡಾ. ನಾರಾಯಣಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Advertisement
bengaluru

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ

ಬೆಂಗಳೂರು:

ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದ ಬಳಿ ಮೈಸೂರಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.

ನಾನು ಇಂದು ಮೈಸೂರಿಗೆ ಭೇಟಿ ನೀಡುತ್ತಿದ್ದೇನೆ. ಮೈಸೂರು ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ. ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲನೆ ನಡೆಸುತ್ತೇನೆ. ಕೋವಿಡ್ ಸೋಂಕು ಹೆಚ್ಚಾಗಿರುವ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ತೀರ್ಮಾನ ಮಾಡಿದ್ದೇನೆ ಎಂದು ಅವರು ತಿಳಿಸಿದರು.

bengaluru bengaluru

ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುತ್ತೇನೆ. ನಂತರ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆಯುತ್ತೇನೆ ಎಂದು ಅವರು ತಿಳಿಸಿದರು.


bengaluru

LEAVE A REPLY

Please enter your comment!
Please enter your name here