Home ಆರೋಗ್ಯ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಲು ಸ್ವಯಂ ಪ್ರೇರಿತರಾಗಿ ಮುಂದೆ ಬನ್ನಿ : ಸಿಎಂ...

45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಲು ಸ್ವಯಂ ಪ್ರೇರಿತರಾಗಿ ಮುಂದೆ ಬನ್ನಿ : ಸಿಎಂ ಮನವಿ

42
0

ಬೆಂಗಳೂರು:

ರಾಜ್ಯದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, 45 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ನಾಗರಿಕ ಬಂಧುಗಳೇ, ಕೋವಿಡ್ ಅಪಾಯವನ್ನು ನಿರ್ಲಕ್ಷಿಸದಿರಿ. ಎಲ್ಲ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ. ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚ. 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಇಂದಿನಿಂದ ಲಸಿಕೆ ಪಡೆಯಬಹುದು, ನಿಮ್ಮ ಹತ್ತಿರದ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆದುಕೊಳ್ಳಿ. ಜೊತೆಯಾಗಿ ನಾವೆಲ್ಲರೂ ಕೊರೋನಾ ಹಿಮ್ಮೆಟ್ಟಿಸೋಣ ಎಂದು ಸಿಎಂ ಮನವಿ ಮಾಡಿದ್ದಾರೆ.

ಬಿಬಿಎಂಪಿಗೆ 1.5 ಲಕ್ಷ ಡೋಸ್ ಲಸಿಕೆ ಪೂರೈಸಲಾಗಿದ್ದು, ಬೆಂಗಳೂರು ನಗರದಾದ್ಯಂತ ಸುಮಾರು 600 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ವಿತರಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here