ಹುಬ್ಬಳ್ಳಿ :
ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಇಂದು ಹುಬ್ಬಳ್ಳಿ-ಧಾರವಾಡ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಕವಾಯತು ಮೈದಾನ ದ ಬಳಿ ಆಯೋಜಿಸಿರುವ “ಪೋಲಿಸ್ ಸಂಸ್ಮರಣಾ ದಿನಾಚರಣೆ” ಕಾರ್ಯಕ್ರಮದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಪೊಲೀಸ್ ಸಂಸ್ಮರಣಾ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ @BSBommai ಅವರು ಇಂದು ಹುಬ್ಬಳ್ಳಿಯ ಸಿ.ಎ.ಆರ್ ಮೈದಾನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸಿದರು.
— CM of Karnataka (@CMofKarnataka) October 21, 2021
ವಿಧಾನ ಪರಿಷತ್ ಸಭಾಪತಿ @HorattiOfficial, ಸಚಿವ @munenakoppa_mla ಉಪಸ್ಥಿತರಿದ್ದರು.#PoliceCommemorationDay2021 pic.twitter.com/qdawTd2pMR
ಮಹಿಳೆಯರ ಆತ್ಮರಕ್ಷಣೆಗಾಗಿ ತರಬೇತಿ ನೀಡುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು,ಕೆಎಸ್ ಆರ್ ಪಿ ಪಡೆ ಹಾಗೂ ಪೋಲಿಸ್ ತರಬೇತಿ ಶಾಲೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿಗಳ ಸೇವೆ ಹಾಗೂ ಅನುಭವವನ್ನು ಬಳಸಿಕೊಂಡು ಈ ತರಬೇತಿಯನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ, ನಾಗರಿಕರ ಸುರಕ್ಷತೆಗಾಗಿ ಪೊಲೀಸರು ಮಾಡುವ ಸೇವೆ ತ್ಯಾಗವನ್ನು ಸ್ಮರಣೆ ಮಾಡಬೇಕು. ನಮ್ಮ ನಾಗರಿಕ ಕರ್ತವ್ಯವನ್ನು ನೆನಪು ಮಾಡಿಕೊಳ್ಳುವ ದಿನವಿದು. ಪೊಲೀಸರು ಜನಸ್ನೇಹಿ ಯಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.