ಮುಖಂಡರಿಂದ ನಗಾರಿ ಬಾರಿಸುವ ಮೂಲಕ ಉದ್ಘಾಟನೆ
ಬೆಂಗಳೂರು/ರಾಮನಗರ:
ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಎರಡನೇ ಹಂತದ ಪಾದಯಾತ್ರೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭಾನುವಾರ ಇಲ್ಲಿನ ಟಿ.ಆರ್. ಮಿಲ್ ಮೈದಾನದಲ್ಲಿ ಚಾಲನೆ ನೀಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಶ್ರೀ ಕ್ಷೇತ್ರ ಆದಿಚುಂಚನಗಿರಿಯ ರಾಮನಗರ ಶಾಖಾ ಮಠದ ಶ್ರೀ ಅನ್ನದಾನಿ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವರಾದ ಕೆ ಎಚ್ ಮುನಿಯಪ್ಪ, ಸಂಸದ ಡಿ.ಕೆ. ಸುರೇಶ್, ರಾಜ್ಯದ ಮಾಜಿ ಸಚಿವರಾದ ಹೆಚ್.ಕೆ ಪಾಟೀಲ್, ಅಲ್ಲಂ ವೀರಭದ್ರಪ್ಪ, ಎಚ್.ಎಂ. ರೇವಣ್ಣ, ಎಂ.ಬಿ. ಪಾಟೀಲ್, ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಕೆಪಿಸಿಸಿ ಕಾರ್ಯದಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಧ್ರುವ ನಾರಾಯಣ್, ರಾಜ್ಯಸಭಾ ಸದಸ್ಯರಾದ ಜಿ.ಸಿ ಚಂದ್ರಶೇಖರ್, ಡಾ ಎಲ್ ಹನುಮಂತಯ್ಯ, ನಾಸೀರ್ ಹುಸೇನ್, ವಿಧಾನ ಸಭಾ ಉಪ ನಾಯಕರಾದ ಯು.ಟಿ ಖಾದರ್, ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕ ಗೋವಿಂದರಾಜ್, ಚಿತ್ರನಟರಾದ ನೆನಪಿರಲಿ ಪ್ರೇಮ್, ಸಾಧು ಕೋಕಿಲ, ಎಂಎಲ್ಸಿ ಎಸ್. ರವಿ ಮತ್ತಿತರರು ಭಾಗವಹಿಸಿದ್ದರು.