Home ರಾಜಕೀಯ 100ಕ್ಕೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಿದ ರಾಜಾಜಿನಗರದ ಪಲ್ಲವಿ ಅವರಿಗೆ ಡಿ.ಕೆ. ಶಿವಕುಮಾರ್ ಅಭಿನಂದನೆ

100ಕ್ಕೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಿದ ರಾಜಾಜಿನಗರದ ಪಲ್ಲವಿ ಅವರಿಗೆ ಡಿ.ಕೆ. ಶಿವಕುಮಾರ್ ಅಭಿನಂದನೆ

91
0
Karnataka Congress Chief congratulates Rajajinagar's Pallavi for registering more than 100 members
Advertisement
bengaluru

ಬೆಂಗಳೂರು:

ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ 100ಕ್ಕೂ ಹೆಚ್ಚು ಜನರನ್ನು ಕಾಂಗ್ರೆಸ್ ಸದಸ್ಯರನ್ನಾಗಿ ನೋಂದಣಿ ಮಾಡಿರುವ ರಾಜಾಜಿನಗರದ ಪಲ್ಲವಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ರಾಜಾಜಿನಗರದ 99ನೇ ವಾರ್ಡ್ ನ ಪಲ್ಲವಿ ಅವರು ಎಐಸಿಸಿಯಿಂದ ನೋಂದಣಿದಾರರಾಗಿ ಆಯ್ಕೆಯಾಗಿದ್ದು, ಒಂದೇ ದಿನದಲ್ಲಿ 182 ಜನರನ್ನು ಕಾಂಗ್ರೆಸ್ ಸದಸ್ಯರನ್ನಾಗಿ ನೋಂದಣಿ ಮಾಡಿದ್ದಾರೆ. ನಿನ್ನೆ ಹೈದರಾಬಾದ್ ಪ್ರವಾಸದಲ್ಲಿದ್ದ ಡಿ.ಕೆ. ಶಿವಕುಮಾರ್ ಅವರು ಈ ವಿಚಾರ ತಿಳಿದು ಖುದ್ದು ತಾವೇ ಪಲ್ಲವಿ ಅವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು. ಆ ಮೂಲಕ ಪಕ್ಷದ ಸದಸ್ಯತ್ವ ನೋಂದಣಿಯಲ್ಲಿ ಶ್ರಮಿಸುತ್ತಿರುವವರಿಗೆ ಉತ್ತೇಜನ ತುಂಬಿದ್ದಾರೆ.

ಈ ಸಮಯದಲ್ಲಿ ಜನರಿಂದ ಯಾವ ರೀತಿ ಪ್ರತಿಕ್ರಿಯೆ ಬರುತ್ತಿದೆ ಎಂದು ಶಿವಕುಮಾರ್ ಅವರು ಕೇಳಿದಾಗ ಪಲ್ಲವಿ ಅವರು, ‘ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಮನೆ, ಮನೆಗೆ ಹೋಗಿ, ರಾಜ್ಯ ಹಾಗೂ ದೇಶಕ್ಕೆ ಕಾಂಗ್ರೆಸ್ ಅಗತ್ಯದ ಬಗ್ಗೆ ವಿವರಿಸುತ್ತಾ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂದು ಹೇಳುತ್ತಿದ್ದೇನೆ. ಜನರು ಕೂಡ ಪಕ್ಷದ ಪರವಾಗಿ ಒಲವು ತೋರುತ್ತಿದ್ದಾರೆ’ ಎಂದು ಹೇಳಿದರು.

bengaluru bengaluru

bengaluru

LEAVE A REPLY

Please enter your comment!
Please enter your name here