ಬೆಂಗಳೂರು:
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಇಂದು ಬೆಂಗಳೂರಿನಲ್ಲಿ ನಡೆಸುತ್ತಿರುವ ಸಭೆಯ ಸಂದರ್ಭ ಮೇಕೆದಾಟು ಅಣೆಕಟ್ಟೆ ಯೋಜನೆ ಆರಂಭಕ್ಕೆ ಮುಹೂರ್ತ ನಿಗದಿ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇಲ್ಲಿ ಓದಿ: ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ಮಾಡಲಿ, ಸರ್ಕಾರದ ಜತೆ ನಾವು ನಿಲ್ಲುತ್ತೇವೆ; ಡಿ.ಕೆ. ಶಿವಕುಮಾರ್
“ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಇಂದು ನಡೆಸಲಿರುವ ಸಭೆಯಲ್ಲಿ ಮೇಕೆದಾಟು ಅಣೆಕಟ್ಟೆ ಯೋಜನೆ ಆರಂಭಕ್ಕೆ ಮುಹೂರ್ತ ನಿಗದಿ ಮಾಡುವರೆಂದು ನಂಬಿದ್ದೇನೆ. ಇದು ಇಡೀ ರಾಜ್ಯದ ಜನರ ನಂಬಿಕೆಯೂ ಹೌದು. ಯಡಿಯೂರಪ್ಪನವರೂ ಈ ನಿಟ್ಟಿನಲ್ಲಿ ಕೈ ಜೋಡಿಸುವರೆಂಬ ವಿಶ್ವಾಸವಿದೆ,” ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಇಂದು ನಡೆಸಲಿರುವ ಸಭೆಯಲ್ಲಿ ಮೇಕೆದಾಟು ಅಣೆಕಟ್ಟೆ ಯೋಜನೆ ಆರಂಭಕ್ಕೆ ಮುಹೂರ್ತ ನಿಗದಿ ಮಾಡುವರೆಂದು ನಂಬಿದ್ದೇನೆ. ಇದು ಇಡೀ ರಾಜ್ಯದ ಜನರ ನಂಬಿಕೆಯೂ ಹೌದು.
— DK Shivakumar (@DKShivakumar) July 13, 2021
ಯಡಿಯೂರಪ್ಪನವರೂ ಈ ನಿಟ್ಟಿನಲ್ಲಿ ಕೈ ಜೋಡಿಸುವರೆಂಬ ವಿಶ್ವಾಸವಿದೆ.
ಜಲಜೀವನ್ ಮಿಷನ್ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ , ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮೊದಲಾದವರು ಉಪಸ್ಥಿತರಿದ್ದರು.
ಇಲ್ಲಿ ಓದಿ: ಮೇಕೆದಾಟು ಯೋಜನೆಯನ್ನು ನಿಲ್ಲಿಸುವುದಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ