ಬೆಂಗಳೂರು:
ಪ್ರಸ್ತುತ ರಾಜಕೀಯ ವಿದ್ಯಾಮಾನ,ವಿಧಾನ ಮಂಡಲ ಅಧಿವೇಶನ,ಉಪ ಚುನಾ ವಣೆ ಸೋಲಿನ ಪರಾಮರ್ಶೆ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆಯನ್ನು ನಾಳೆ ಖಾಸಗಿ ಹೊಟೇಲಿನಲ್ಲಿ ಕರೆಯಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಸಭೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕದ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್,ರಾಜ್ಯಸಭಾ ಸದಸ್ಯ ಮತ್ತುರಾಜ್ಯಸಭಾ ಸದಸ್ಯರಾದ ಮಲ್ಲಿಕರ್ಜುನ್ ಖರ್ಗೆ,ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು ಮತ್ತು ಹಿರಿಯ ಮುಖಂಡರು ಭಾಗವಹಿ ಸಲಿದ್ದಾರೆ.
ನಾಳಿನ ಸಭೆಯಲ್ಲಿ ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಪಕ್ಷದಅಭ್ಯರ್ಥಿಗಳ ಸೋಲಿನ ಬಗ್ಗೆ ಆತ್ಮಾವಲೋಕನ ನಡೆಯಲಿದೆ.ಅಲ್ಲದೆ ಮುಂಬರುವ ಮಸ್ಕಿ,ಬಸವ ಕಲ್ಯಾಣ,ಬೆಳಗಾವಿ ಲೋಕಸಭಾ ಕ್ಷೇತ್ರ ಗಳ ಉಪ ಚುನಾವಣೆ ತಂತ್ರಗಾರಿಕೆ,ಅಭ್ಯರ್ಥಿಗಳು ಮುಂದಿನ ಕಾರ್ಯತಂತ್ರಗಳ ಬಗ್ಗೆ ಮಹತ್ವದ ಚೆರ್ಚೆ ನಡೆಯ ಲಿದೆ ಎನ್ನಲಾಗಿದೆ.ಕಳೆದ ಚುನಾವಣೆ ಸೋಲಿನ ಹಿನ್ನಲೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾದ ಚುನಾವಣಾ ಕಾರ್ಯತಂತ್ರಗಳು,ಹೊಸ ಹೊಸ ವಿಧಾನಗಳು,ನಾಯಕರಲ್ಲಿನ ಒಗ್ಗಟ್ಟಿನ ಕೊರತೆ,ಚುನಾವಣಾ ಉಸ್ತುವಾರಿ ಹಂ ಚಿಕೆ ಸೇರಿದಂತೆ ಮಹತ್ವದ ತೀರ್ಮಾನಗಳನ್ನು ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ.
ಡಿಸೆಂಬರ್ 7 ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಯಾವೆಲ್ಲಾ ವಿಚಾರಗಳನ್ನು ಮುಂದಿ ಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟಕ್ಕಿಳಿಯಬೇಕು.
ಅತಿವೃಷ್ಠಿ, ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ವೈಫಲ್ಯ,ಮರಾಠ ಪ್ರಾಧಿಕಾರ ರಚನೆ,ಜಾತಿ ಮೀಸಲಾತಿ ವಿಚಾರಗಳು,ಶಾಲಾ ಕಾಲೇಜು ಆರಂಭಿಸುವುದರ ಬಗೆ ಗಿನ ಗೊಂದಲಗಳು,ಖಾಸಗಿ ಶಾಲೆಗಳು ಪೋಷಕರಿಂದ ಬಲವಂತದ ಶುಲ್ಕ ವಸೂಲಾತಿ ಸೇರಿದಂತೆ ಪ್ರಮುಖ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಗ್ರ ಚೆರ್ಚೆ ನಡೆಯಲಿದೆ ಎನ್ನಲಾಗಿದೆ.