Home ಬೆಂಗಳೂರು ನಗರ ಪ್ರಚೋದನಕಾರಿ ಹೇಳಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು

ಪ್ರಚೋದನಕಾರಿ ಹೇಳಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು

42
0
Karnataka Congress files complaint against Union Home Minister Amit Shah for provocative staetment
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ಆಗುತ್ತದೆ ಎಂದು ರಾಜ್ಯದ ಮತದಾರರಿಗೆ ಬೆದರಿಕೆ ಒಡ್ಡಿರುವ ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಕೋರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಎಐಸಿಸಿ ವಕ್ತಾರ ಗೌರವ್ ವಲ್ಲಭ್ ಅವರು ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸರಿಗೆ ಗುರುವಾರ ದೂರು ಸಲ್ಲಿಸಿದರು.

ಬೆಂಗಳೂರು:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದು, ದ್ವೇಷ ಹರಡಲು ಪ್ರಯತ್ನ ನಡೆಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದ ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ.

ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಕಾಂಗ್ರೆಸ್ ಮುಖಂಡರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಡಾ ಪರಮೇಶ್ವರ್ ಮತ್ತು ಡಿಕೆ ಶಿವಕುಮಾರ್ ಅವರು, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಮತ್ತು ಬಿಜೆಪಿ ರ್ಯಾಲಿ ಆಯೋಜಕರ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ರಣಕಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಕೋಮು ಗಲಭೆಗಳು ಸೃಷ್ಟಿಯಾಗಲಿವೆ” ಎಂದು ಅಮಿತ್ ಶಾ ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದ್ದು, ಉದ್ದೇಶಪೂರ್ವಕವಾಗಿ ಅಮಿತ್ ಶಾ ಅವರು ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದು, ದ್ವೇಷ ಹರಡಲು ಬಿಜೆಪಿಯ ಸಮಾವೇಶಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

“ಬಿಜೆಪಿ ಪರ ಮತ ಹಾಕುವಂತೆ ಬಿಜೆಪಿ ನಾಯಕರು ಮತದಾರರನ್ನು ಬೆದರಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ವಿರೋಧ ಪಕ್ಷವಾದ ಕಾಂಗ್ರೆಸ್‌ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ.

ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ಐಪಿಸಿ 1860 ಮತ್ತು ಪ್ರಜಾಪ್ರತಿನಿಧಿ ಕಾಯಿದೆ, 1951ರ ಅಡಿ ದೂರ ದಾಖಲಿಸಲಾಗಿದೆ.

ಸ್ವತಃ ಗೃಹ ಮಂತ್ರಿಯಿಂದಲೇ ಕೋಮು ದ್ವೇಷದ ಭಾಷಣ ಹೊರಬರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಹೆಚ್ಚಾಗಲಿವೆ ಎಂದು ಅಮಿತ್ ಶಾ ಹೇಳಿಕೆ ನೀಡಿದ್ದಾರೆ”. ರಾಜ್ಯದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ಅಮಿತ್ ಶಾ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು” ಎಂದು ಕಾಂಗ್ರೆಸ್ ಆಗ್ರಹಿಸಿದೆ.

ದೂರು ನೀಡಿದ ಬಳಿಕ ಪ್ರತಿಕ್ರಿಯೆ ನೀಡಿದ ಡಿಕೆ.ಶಿವಕುಮಾರ್ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಗಳು ಸೃಷ್ಟಿಯಾಗಲಿವೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಇದನ್ನು ಅವರು ಹೇಗೆ ಹೇಳುತ್ತಾರೆ? ಹೇಳಿಕೆ ಕುರಿತು ಚುನಾವಣಾ ಆಯೋಗಕ್ಕೂ ದೂರು ನೀಡಿದ್ದೇವೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here