Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಬೆಂಗಳೂರು ನಗರ

ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Vighnesh Pawar August 2, 2023 10:00 PM 1 minute read
Karnataka Congress Hopes to win 20-24 seats in Parliament elections 2024: Chief Minister Siddaramaiah

Karnataka Congress Hopes to win 20-24 seats in Parliament elections 2024: Chief Minister Siddaramaiah

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಪ್ರತಿಯೊಬ್ಬ ಫಲಾನುಭವಿಗೆ ಐದು ಗ್ಯಾರಂಟಿಗಳು ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು

ಐದು ಗ್ಯಾರಂಟಿಗಳ ಯಶಸ್ವಿ ಜಾರಿಯಿಂದ ಕರ್ನಾಟಕ ಮಾದರಿ ಅಭಿವೃದ್ಧಿಗೆ ಹೈಕಮಾಂಡ್ ಮೆಚ್ಚುಗೆ

ನವ ದೆಹಲಿ/ಬೆಂಗಳೂರು:

ಐದು ಗ್ಯಾರಂಟಿಗಳ ಜಾರಿ ಮೂಲಕ ಕರ್ನಾಟಕ ಮಾದರಿ ಅಭಿವೃದ್ಧಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದ್ದು ನಾವು 20-24 ಸೀಟುಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಎಐಸಿಸಿ ಕಚೇರಿಯಲ್ಲಿ ನಡೆದ ಸತತ ಆರು ಗಂಟೆಗಳ ಸಭೆ ಬಳಿಕ ಮಾಧ್ಯಮಗೋಷ್ಢಿಯಲ್ಲಿ ಮಾತನಾಡಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ನಮ್ಮ ವರಿಷ್ಠರಾದ ರಾಹುಲ್ ಗಾಂಧಿ ಹಾಗೂ ಇನ್ನಿತರೆ ಎಐಸಿಸಿ ನಾಯಕರ ಜತೆ ಕರ್ನಾಟಕದ 30 ಕ್ಕೂ ಹೆಚ್ಚು ಮಂದಿ ಪಕ್ಷದ ನಾಯಕರುಗಳ ಮತ್ತು ಸಚಿವರ ಸಭೆ ನಡೆದಿದೆ.

ಎರಡು ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಐದು ಗ್ಯಾರಂಟಿಗಳು ಪ್ರತಿಯೊಬ್ಬ ಫಲಾನುಭವಿಗೆ ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಸದಾಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ಹೀಗಾಗಿ, ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆಯನ್ನು ಹಲವರು ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರುಗಳಿಗೆ ನೀಡುವ ಕುರಿತು ಚರ್ಚೆ ನಡೆದಿದೆ ಎಂದರು.

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ.

ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದರು.

ಗೋಷ್ಠಿಯಲ್ಲಿ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎವೈಸಿಸಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರುಗಳು ಉಪಸ್ಥಿತರಿದ್ದರು.

About the Author

Vighnesh Pawar

Subscriber

View All Posts

Post navigation

Previous: Gangadhareshwar Temple: ಗಂಗಾಧರೇಶ್ವರ ದೇವಸ್ಥಾನದ ಗೋಡೆ ದುರಸ್ತಿ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ
Next: “ಇಂಡಿಯಾ”ಗೆ ಕನಿಷ್ಟ 20 ಲೋಕಸಭೆ ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Stories

ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

The Bengaluru Live November 13, 2026 11:05 PM
ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM

Latest Post

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20 ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

November 13, 2026 11:05 PM
ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ ಬೆಂಗಳೂರಿನ ಎಸ್‌ಎಂವಿಟಿ ಚಾಲನಾ ಕಾರ್ಯಕ್ರಮದಲ್ಲಿ ವಂದೇ ಭಾರತ್ ರೈಲಿನ ಪಕ್ಕದಲ್ಲಿ ನಿಂತ ಗಣ್ಯರು
  • Uncategorized
  • ಕರ್ನಾಟಕ

ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ

November 13, 2026 10:11 PM
ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

November 13, 2026 7:55 PM
ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

November 13, 2026 7:40 PM
ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

November 13, 2026 4:40 PM
ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ IIM ಬೆಂಗಳೂರಿನಲ್ಲಿ ಭಾಷಣ ಮಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

November 13, 2026 4:22 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

The Bengaluru Live November 13, 2026 11:05 PM
ಬೆಂಗಳೂರಿನ ಎಸ್‌ಎಂವಿಟಿ ಚಾಲನಾ ಕಾರ್ಯಕ್ರಮದಲ್ಲಿ ವಂದೇ ಭಾರತ್ ರೈಲಿನ ಪಕ್ಕದಲ್ಲಿ ನಿಂತ ಗಣ್ಯರು
  • Uncategorized
  • ಕರ್ನಾಟಕ

ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ

The Bengaluru Live November 13, 2026 10:11 PM
ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20
  • ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ
  • ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ
  • ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ
©Copyright 2025 The Bengaluru Live All rights reserved. | MoreNews by AF themes.