ರಾಮನಗರ :
ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಮಂದಿ ವಿರುದ್ದ ಎಫ್ಐಆರ್ ದಾಖಲು ಮಾಡಲಾಗಿದೆ.
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವೇಳೆ ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ ಈ ಎಫ್ಐಆರ್ ದಾಖಲು ಮಾಡಲಾಗಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿಪತ್ತು ನಿರ್ವಹಣಾ ಕಾಯಿದೆ 2005ರ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Also Read: Karnataka Cong’s Mekedatu ‘padayatra’: FIR against DK Shivakumar, Siddaramaiah