ಭಾರತ ಇಂದು ಶತಕೋಟಿ ಡೋಸ್ ಕೊರೊನಾ ಲಸಿಕೆ ಪೂರೈಸುವ ಮೂಲಕ ಮಹತ್ತರ ಮೈಲಿಗಲ್ಲು ಸಾಧಿಸಿದೆ. ಭಾರತದಲ್ಲಿ ವಿತರಿಸಲಾಗಿರುವ ಲಸಿಕೆಯ ಪ್ರಮಾಣ ಅಮೆರಿಕಾ ಮತ್ತು ಐರೋಪ್ಯ ರಾಷ್ಟ್ರಗಳ ಒಟ್ಟು ಲಸಿಕೆಗಿಂತ ಹೆಚ್ಚಾಗಿದೆ.
ಈ ನೂರು ಕೋಟಿ ಡೋಸ್ಗಳಲ್ಲಿ ಕರ್ನಾಟಕದ ಪಾಲು 6.21 ಕೋಟಿ ಡೋಸ್. ಜನವರಿ 16ರಂದು ಆರಂಭವಾದ ಲಸಿಕಾ ಅಭಿಯಾನ ಕೇವಲ 9 ತಿಂಗಳುಗಳಲ್ಲಿ ಶತಕೋಟಿ ಪೂರೈಸುವ ಮೂಲಕ ವಿಶ್ವದ ಅತ್ಯಂತ ದೊಡ್ಡ ಹಾಗೂ ವೇಗವಾದ ಲಸಿಕಾ ಅಭಿಯಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಈ ಮಹತ್ತರ ಸಾಧನೆಗೆ ದೇಶದ ಖ್ಯಾತ ವೈದ್ಯರು ಹಾಗೂ ಆರೋಗ್ಯ ಕ್ಷೇತ್ರದ ಪರಿಣಿತರು ಕಾರಣ.
ಕೇವಲ 9 ತಿಂಗಳಲ್ಲಿ ನೂರು ಕೋಟಿ ಲಸಿಕೆ ನೀಡಿರುವುದು ಬಹುದೊಡ್ಡ ಸಾಧನೆ. ಈ ಪೈಕಿ ಬಹುತೇಕ ಲಸಿಕೆ ಉಚಿತವಾಗಿದೆ. ಇಂತಹ ಅದ್ಭುತ ಶ್ರಮ ವಹಿಸಿದಕ್ಕೆ ಸರ್ಕಾರ ಅಭಿನಂದನಾರ್ಹವಾಗಿದೆ. ಸಾಂಕ್ರಾಮಿಕದ ಆರಂಭದಿಂದಲೇ ಕರ್ನಾಟಕವು ಇದರ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದೆ.