ಬೆಂಗಳೂರು:
ರಾಜ್ಯದಲ್ಲಿ ಇಂದು ರಾಜ್ಯಾದ್ಯಂತ ದಾಖಲೆಯ 2,010 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,73,657ಕ್ಕೆ ಏರಿಕೆಯಾಗಿದೆ.
ಕೊರೋನಾ 2ನೇ ಅಲೆಯ ಭೀತಿ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 5 ಮಂದಿ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,449ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 1,280 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,19,838ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಮೂರು ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Today's Media Bulletin 23/03/2021
— K'taka Health Dept (@DHFWKA) March 23, 2021
Please click on the link below to view bulletinhttps://t.co/wFAM2a9ltH @mla_sudhakar @Comm_dhfwka @MDNHM_Kar @KarnatakaVarthe @PIBBengaluru @CovidKarnataka pic.twitter.com/qZ6xyffw3G
ರಾಜ್ಯದಲ್ಲಿ ಇಂದು 677 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,45,594ಕ್ಕೆ ಏರಿಕೆಯಾಗಿದೆ. ಇನ್ನು 15,595ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 136 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.