ರೈಲು, ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ, ಆದರೆ ವಾಹನ ಮತ್ತು ಅಂತರ-ಜಿಲ್ಲಾ ಸಂಚಾರವನ್ನು ನಿರ್ಬಂಧಿಸಲಾಗಿದೆ
ಬ್ಯಾಂಕುಗಳು ಮತ್ತು ಅಗತ್ಯ ಸರ್ಕಾರಿ ಸೇವೆಗಳು ತೆರೆದಿರುತ್ತವೆ; ಬೆಳಿಗ್ಗೆ 6 ರಿಂದ 10 ರವರೆಗೆ ದಿನಸಿ ಅಂಗಡಿಗಳು, ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಹಾಪ್‌ಕಾಮ್ಸ್ ತೆರೆದಿರುತ್ತವೆ
ಬೆಂಗಳೂರು:
ರಾಜ್ಯದಲ್ಲಿ ಜನತಾ ಕರ್ಫ್ಯೂ ಹೊರತಾಗಿಯೂ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮೇ 10 ರಿಂದ 24ರ ವರೆಗೆ ರಾಜ್ಯಾದ್ಯಂತ ಕಟ್ಟುನಿಟ್ಟಾದ ನಿಯಮಗಳು ಜಾರಿ ಮಾಡಿದ್ದಾರೆ.
ಈ ಕುರಿತಂತೆ ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಅಧಿಕತವಾಗಿ ಘೋಷಣೆ ಮಾಡಿದ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಮೇ 10ರ ಬೆಳಿಗ್ಗೆ 6.30ರಿಂದ 24ರ ಬೆಳಿಗ್ಗೆ 6.30ರವರೆಗೆ ಕಟ್ಟುನಿಟ್ಟಾದ ನಿಯಮಗಳು ಘೋಷಿಸಿದ್ದಾರೆ.
'ರಾಜ್ಯದಲ್ಲಿ ಕೋವಿಡ್-19 2ನೇ ಅಲೆ ತೀವ್ರ ಪರಿಣಾಮ ಬೀರುತ್ತಿರುವುದರಿಂದ ಕಠಿಣ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಇದೇ ಮೇ 10, ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆವರೆಗೆ ರಾಜ್ಯಾದ್ಯಂತ ಪರಿಷ್ಕೃತ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗುವುದು. ನಾಗರಿಕರು ಸಹಕರಿಸಬೇಕು ಎಂದು ಕೋರುತ್ತೇನೆ' : ಮುಖ್ಯಮಂತ್ರಿ @BSYBJP.
— CM of Karnataka (@CMofKarnataka) May 7, 2021
ಬೆಳಿಗ್ಗೆ 6ರಿಂದ10ರವರೆಗೆ ಮಾತ್ರ ತಿನಿಸುಗಳು, ಮಾಂಸದ ಅಂಗಡಿಗಳು ಮತ್ತು ತರಕಾರಿ ಅಂಗಡಿಗಳು ಕಾರ್ಯನಿರ್ವಹಿಸಬಹುದು. ಅದೂ ಹೊಟೆಲ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶವಿರುತ್ತದೆ. ಬೆಳಗ್ಗೆ 10 ಗಂಟೆಯ ಬಳಿಕ ಯಾರೂ ಕೂಡ ರಸ್ತೆಗಳಲ್ಲಿ ಓಡಾಡುವಂತಿಲ್ಲ, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಗತ್ಯ ವಸ್ತುಗಳ ಸರಬರಾಜಿಗೆ ಗೂಡ್ಸ್ ವಾಹನಗಳ ಓಡಾಟ ಇರಲಿದ್ದು, ಆನ್‌ಲೈನ್ ಡೆಲಿವರಿ ಸರ್ವಿಸ್‌ಗೂ ಅವಕಾಶ ನೀಡಲಾಗಿದೆ ಎಂದು ಹೇಳಿದರು.





