
ಬೆಂಗಳೂರು:
ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಗರ ಪ್ರದಕ್ಷಿಣೆ ಪ್ರಾರಂಭವಾಗಿದೆ.
ಮುಂಗಾರು ಆರಂಭ ಹಿನ್ನೆಲೆ ಡಿಸಿಎಂ ಸಿಟಿ ರೌಂಡ್ಸ್ ಮಹತ್ವ ಪಡೆದುಕೊಂಡಿದೆ. ಅವರು ಯಮಲೂರು, ದೊಮ್ಮಲೂರು, ಬೆಳ್ಳಂದೂರು, ಸರ್ಜಾಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ಹೇಳಿದ್ದಾರೆ.

ಶಿವಕುಮಾರ್ ಜೊತೆ ಕರ್ನಾಟಕದ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಡಿಎ ಆಯುಕ್ತ ಜಿ.ಕುಮಾರ್ ನಾಯ್ಕ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿ ನಾಥ್, ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್, ಬಿಬಿಎಂಪಿ, ಬಿಡಿಎ ಮತ್ತಿತರ ಇಲಾಖೆ ಅಧಿಕಾರಿಗಳು ಇದ್ದಾರೆ.