Karnataka DCM DK Shivakumar | Kateel, Kumaraswamy not judges to send me to jail
ಬೆಳಗಾವಿ:
“ನನ್ನನ್ನು ಜೈಲಿಗೆ ಕಳುಹಿಸಲು ನಳೀನ್ ಕುಮಾರ್ ಕಟೀಲ್ ಆಗಲಿ, ಕುಮಾರಸ್ವಾಮಿ ಅವರಾಗಲಿ ನ್ಯಾಯಾಧೀಶರಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬೆಳಗಾವಿಯಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ, “ಶಿವಕುಮಾರ್ ಅವರು ಎರಡನೇ ಬಾರಿಗೆ ತಿಹಾರ್ ಜೈಲಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳಲಿ” ಎಂಬ ಕಟೀಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು.
ಶಿವಕುಮಾರ್ ಅವರು ಕೇಡಿಯಂತೆ ವರ್ತಿಸಬಾರದು ಎಂಬ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೆ ಅವರ ಪಕ್ಷದವರೇ ಲೂಟಿ ರವಿ ಎಂಬ ಹೆಸರು ಕೊಟ್ಟಿದ್ದಾರೆ. ಅವರ ಪಕ್ಷದವರೇ ಏನೆಲ್ಲಾ ಹೇಳಿದ್ದಾರೆ ಎಂಬ ದಾಖಲೆ ನನ್ನ ಬಳಿ ಇದೆ. ಇದಕ್ಕೆ ಸಮಯ ಬಂದಾಗ ಉತ್ತರ ನೀಡುತ್ತೇನೆ” ಎಂದು ತಿಳಿಸಿದರು.
