Karnataka DCM DK Shivakumar threatens | Major operation should be done for BJP-JDS
ಬೆಂಗಳೂರು:
“ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಬುಧವಾರ ಪ್ರತಿಕ್ರಿಯೆ ವ್ಯಕ್ತಪಡಿಸಿದರು.
ಬಿಜೆಪಿ ಮತ್ತು ಜೆಡಿಎಸ್ ನಿಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು.
ಜಗದೀಶ್ ಶೆಟ್ಟರ್ ಹಾಗೂ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಹಾಗೆಲ್ಲ ಎಲ್ಲದರಲ್ಲೂ ಅನುಮಾನಪಡಲು ಆಗಲ್ಲ. ಜಗದೀಶ್ ಶೆಟ್ಟರ್ ಅವರು, ತಮ್ಮ ಶಕ್ತಿ ಏನಿದೆ ಎಂದು ತೋರಿಸಿದ್ದಾರೆ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ” ಎಂದರು.
ಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ಕೆಲಸ ಮಾಡುತ್ತಿದೆ ಎನ್ನುವ ಬಗ್ಗೆ ಗಮನ ಸೆಳೆದಾಗ, “ನನಗೆ ಎಲ್ಲಾ ಗೊತ್ತಿದೆ ನನಗೆ. ಯಾವ ಶಾಸಕರನ್ನು, ಯಾರು ಯಾವಾಗ ಭೇಟಿ ಮಾಡಿದರು, ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟವರೇ ನನಗೆ ಮತ್ತು ಸಿಎಂಗೆ ಮಾಹಿತಿ ನೀಡುತ್ತಿದ್ದಾರೆ”.
“ಬಿಜೆಪಿಯವರು ಏನು ಆಫರ್ ಕೊಡುತ್ತಿದ್ದಾರೆ ಅನ್ನೋದನ್ನೂ ಹೇಳಿದ್ದಾರೆ. ನಮ್ಮ ಬಳಿ ಪ್ರತಿಯೊಂದು ಮಾಹಿತಿ ಇದೆ. ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ಅಧಿವೇಶನದಲ್ಲಿ ಹೇಳಿಸುತ್ತೇನೆ” ಎಂದು ಹೇಳಿದರು.
