Karnataka DCM reacts after Income Tax Raid on Contractor R Ambikapathy | No Income Tax Raid without political motive
ಬೆಂಗಳೂರು:
“ರಾಜಕೀಯ ಉದ್ದೇಶವಿಲ್ಲದೆ ದೇಶದಲ್ಲಿ ಐಟಿ ದಾಳಿ ನಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಉತ್ತರಿಸಿದರು.
ಬೆಂಗಳೂರಿನಲ್ಲಿ ಐಟಿ ದಾಳಿ ಹಿಂದೆ ರಾಜಕೀಯ ಇದೆಯೇ ಎಂದು ಕೇಳಿದಾಗ, “ರಾಜಕೀಯ ಇಲ್ಲದೆ ಯಾವ ಐಟಿ ದಾಳಿ ನಡೆಯುವುದಿಲ್ಲ. ಕೇವಲ ನಮ್ಮಲ್ಲಿ ಮಾತ್ರ ಅಲ್ಲ ಬೇರೆ ರಾಜ್ಯಗಳಲ್ಲೂ ರಾಜಕೀಯ ಪ್ರೇರಿತ ಐಟಿ ದಾಳಿ ಆಗುತ್ತಿವೆ” ಎಂದು ತಿಳಿಸಿದರು.
ಪಂಚರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ಕಳಿಸಲಾಗುತ್ತಿದೆ ಎಂಬ ಮಾಜಿ ಸಚಿವ ಅಶ್ವಥ್ ನಾರಾಯಣ ಅವರ ಆರೋಪದ ಬಗ್ಗೆ ಕೇಳಿದಾಗ, “ಹಾದಿ ಬೀದಿಯಲ್ಲಿ ಹೋಗುವವರ ಮಾತಿಗೆ ನಾನು ಉತ್ತರಿಸುವುದಿಲ್ಲ” ಎಂದು ತಿಳಿಸಿದರು.
ಬಿಬಿಎಂಪಿಯಿಂದ ಬಿಡುಗಡೆ ಆದ 650 ಕೋಟಿ ಅನುದಾನದಲ್ಲಿ ಪಡೆದ ಕಮಿಷನ್ ಹಣವನ್ನು ಅಂಬಿಕಾಪತಿ ಮೂಲಕ ಕಳಿಸುತ್ತಿದ್ದರು ಎಂಬ ಆರೋಪದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನನಗೆ ಗೊತ್ತಿಲ್ಲ” ಎಂದು ತಿಳಿಸಿದರು.
