Home ಬೆಂಗಳೂರು ನಗರ ಮಲ್ಲೇಶ್ವರಂ ಕ್ಷೇತ್ರದಲ್ಲಿ ಲಸಿಕಾ ಅಭಿಯಾನ ತ್ವರಿತಗೊಳಿಸಲು ಡಾ.ಸಿ.ಎನ್.ಅಶ್ವತ್ಥ ನಾರಾಯಣ ಒತ್ತು

ಮಲ್ಲೇಶ್ವರಂ ಕ್ಷೇತ್ರದಲ್ಲಿ ಲಸಿಕಾ ಅಭಿಯಾನ ತ್ವರಿತಗೊಳಿಸಲು ಡಾ.ಸಿ.ಎನ್.ಅಶ್ವತ್ಥ ನಾರಾಯಣ ಒತ್ತು

49
0
ಪ್ರಾತಿನಿಧ್ಯ ಚಿತ್ರ

ಇನ್ನೂ ಮೊದಲ ಡೋಸ್ ಲಸಿಕೆ ಪಡೆಯದವರ ಪಟ್ಟಿ ಸಲ್ಲಿಸಲು ಸಂಘ ಸಂಸ್ಥೆಗಳಿಗೆ ಮನವಿ

ಬೆಂಗಳೂರು:

ಮಲ್ಲೇಶ್ವರಂ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆಯ ಮೊದಲನೇ ಡೋಸ್ ಇನ್ನೂ ಯಾರಿಗೆ ಆಗಿಲ್ಲವೋ ಅಂಥವರ ಹೆಸರುಗಳ ಪಟ್ಟಿಯನ್ನು ತಮ್ಮ ಕಚೇರಿಗೆ ಸಲ್ಲಿಸುವಂತೆ ಕ್ಷೇತ್ರದ ಶಾಸಕರೂ ಆದ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಕ್ಷೇತ್ರ ವ್ಯಾಪ್ತಿಯ ಸಂಘ ಸಂಸ್ಥೆಗಳಿಗೆ ಅವರು ಪತ್ರ ಬರೆದಿದ್ದಾರೆ. ಕೋವಿಡ್ ಲಸಿಕೆಯ ಒಂದನೇ ಡೋಸ್ ಹಾಕಿಸಿಕೊಳ್ಳಬೇಕಾಗಿರುವವರ 18 ವರ್ಷವಾದವರ ಪಟ್ಟಿಯನ್ನು ತಮ್ಮ ಕ್ಷೇತ್ರ ಕಚೇರಿಗೆ ಸಲ್ಲಿಸಲು ಅಥವಾ +91 80 23563944 ಸಂಖ್ಯೆಯನ್ನು ಬೆಳಿಗ್ಗೆ 9ರಿಂದ- ಸಂಜೆ 5ರೊಳಗೆ ಸಂಪರ್ಕಿಸಿ ಮಾಹಿತಿ ಕೊಡಲು ಕೋರಿದ್ದಾರೆ.

ಮೇ ತಿಂಗಳಿಂದ ಇಲ್ಲಿಯವರೆಗೆ ಕ್ಷೇತ್ರದ ಎಲ್ಲಾ ವಾರ್ಡ್ ಗಳಲ್ಲಿ 81 ಲಸಿಕಾ ಶಿಬಿರಗಳನ್ನು ನಡೆಸಲಾಗಿದ್ದು, 18ರಿಂದ 45 ವಯೋಮಾನದೊಳಗಿನ 40,043 ನಾಗರಿಕರು ಪ್ರಯೋಜನ ಪಡೆದಿದ್ದಾರೆ. 45 ವರ್ಷವಾದವರನ್ನು ಸರ್ಕಾರಿ ಲಸಿಕಾ ಕೇಂದ್ರಗಳಿಗೆ ತೆರಳಲು ಉತ್ತೇಜಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮಲ್ಲೇಶ್ವರಂ ಕ್ಷೇತ್ರವು 18 ವರ್ಷ ಮೇಲ್ಪಟ್ಟವರಿಗೆ ಶೇ 100ರಷ್ಟು ಲಸಿಕೆ ಪೂರೈಸಿದ ಮೊದಲ ಕ್ಷೇತ್ರವಾಗಬೇಕೆಂಬ ಗುರಿಯೊಂದಿಗೆ ಕೆಲಸ ಮಾಡಲಾಗುತ್ತಿದೆ, ಲಸಿಕಾ ವ್ಯಾಪ್ತಿಗೆ ಎಲ್ಲರನ್ನೂ ಒಳಪಡಿಸಲು ಅಗತ್ಯ ಸಹಕಾರ ನೀಡಬೇಕು. ಈ ಸಂಬಂಧ ಯಾವುದೇ ಮಾಹಿತಿಯನ್ನು ashwathcn@gmail.com ಗೆ ಇ-ಮೇಲ್ ಕೂಡ ಮಾಡಬಹುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here