
Karnataka DGP orders to put up board with phone number of top officers in all police stations
ಬೆಂಗಳೂರು:
ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳು ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಇರುವ ನಾಮಫಲಕ ಹಾಕಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಇದರಿಂದ ದೂರುಗಳನ್ನು ಪೊಲೀಸರು ಗಮನಿಸದಿದ್ದರೆ ಸಾರ್ವಜನಿಕರು ಉನ್ನತಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಡಿಜಿಪಿ ಆದೇಶದಲ್ಲಿ ತಿಳಿಸಿದ್ದಾರೆ.
ಕಮೀಷನರೇಟ್ ವ್ಯಾಪ್ತಿಯಲ್ಲಿ ಸಿಒಪಿ, ಡಿಸಿಪಿ ಮತ್ತು ಎಸಿಪಿ ಮತ್ತು ಜಿಲ್ಲಾ ಮಟ್ಟದಲ್ಲಿ ಎಸ್ ಪಿ, ಹೆಚ್ಚುವರಿ ಎಸ್ಪಿ ಮತ್ತು ಡಿವೈಸ್ಪಿ ಸಂಪರ್ಕಿಸಲು ಅನುಕೂಲವಾಗುವಂತೆ ಅವರ ಮೊಬೈಲ್ ನಂಬರ್ ವುಳ್ಳ ನಾಮಫಲಕವನ್ನು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಹಾಕುವಂತೆ ಅವರು ಆದೇಶ ಹೊರಡಿಸಿದ್ದಾರೆ.