ಬೆಂಗಳೂರು:
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೇವಲ ಗಾಳಿಮಾತು, ಸತ್ಯಕ್ಕೆ ದೂರವಾದ ಸಂಗತಿ ಎಂದು ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಾಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಜನರ ನಿರೀಕ್ಷೆಗೆ ತಕ್ಕಂತೆ ಉತ್ತಮ ಕೆಲಸ ಮಾಡುತ್ತಿದ್ದು, ಉಳಿದ ಅವಧಿಗೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ, ರಾಜೀನಾಮೆ ಕೊಡುತ್ತಾರೆ ಎಂಬುದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಅವರು ಹೇಳಿದರು
ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ವದಂತಿ ಅಷ್ಟೇ, ಅವರೆ ಮುಂದುವರೆಯುತ್ತಾರೆ.ಜೊತೆಗೆ ಸಂಪುಟ ಪುನಾರಚನೆ ಇಲ್ಲ ಎಂದು ಹೇಳಿದರು .
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋದ ಬಗ್ಗೆ ಹೆಚ್ಚು ಮಾತನಾಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಹೇಳಿದರು.
ಇದನ್ನೂ ಓದಿ: ಕಟೀಲ್ ಆಡಿಯೋ ವೈರಲ್: ರಾಜ್ಯದಲ್ಲಿ ಸಿಎಂ ಬದಲಾವಣೆ ಫಿಕ್ಸ್
ಇದನ್ನೂ ಓದಿ: ಆಡಿಯೋ ಮೂಲಕ ಕಳಂಕ ತರುವ ಕೆಲಸ; ತನಿಖೆಗೆ ನಳಿನ್‍ಕುಮಾರ್ ಕಟೀಲ್ ಮನವಿ
ಇದನ್ನೂ ಓದಿ: ಮಂತ್ರಿ ಸ್ಥಾನ ಹೋದರೆ ಗೂಟ ಹೋದಂತೆ: ಸಚಿವ ಈಶ್ವರಪ್ಪ