ಬೆಂಗಳೂರು:
ಕೋವಿಡ್ ಸೋಂಕಿತರ ಪಾಲಿಗೆ ಆಪ್ತರಕ್ಷಕನಂತೆ ನೆರವಿಗೆ ಬರುತ್ತಿರುವ ʼಆಮ್ಲಜನಕ ಸಾಂದ್ರಕʼಗಳನ್ನು ಒದಗಿಸುವ ಕೆಲಸ ಮುಂದುವರಿದಿದ್ದು, ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶುಕ್ರವಾರ ವಿವಿಧ ವಿಧಾನಸಭೆ ಕ್ಷೇತ್ರಗಳಿಗೆ 30 ಸಾಂದ್ರಕಗಳನ್ನು ಹಸ್ತಾಂತರಿಸಿದರು.
ಡಿಸಿಎಂ ಅವರು ವೈಯಕ್ತಿಕ ನೆಲೆಯಲ್ಲಿ ಈ ಸಾಂದ್ರಕಗಳನ್ನು ನೀಡಿದರು.
ಹೊನ್ನಾಳಿ, ರೋಣ ಹಾಗೂ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರಗಳಿಗೆ ತಲಾ 5 ಆಮ್ಲಜನಕ ಸಾಂದ್ರಕಗಳನ್ನು ಡಿಸಿಎಂ ನೀಡಿದರು.
ರೋಣ ಶಾಸಕ ಕಳಕಪ್ಪ ಬಂಡಿ ಅವರು ಡಿಸಿಎಂ ಅವರಿಂದ ಆಮ್ಲಜನಕ ಸಾಂದ್ರಕಗಳನ್ನು ಸ್ವೀಕರಿಸಿ ತಮ್ಮ ಕ್ಷೇತ್ರಗಳಿಗೆ ರವಾನಿಸಿದರು.
ಹೊನ್ನಾಳಿ ಕ್ಷೇತ್ರದ ಶಾಸಕರೂ ಆದ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ರೇಣಾಕಾಚಾರ್ಯ ಅವರಿಗೆ ಅವರ ಅನುಪಸ್ಥಿತಿಯಲ್ಲಿ ಐದು ಸಾಂದ್ರಕಗಳನ್ನು ನೀಡಿದರು.