Home ಆರೋಗ್ಯ ಬ್ಯಾಟರಾಯನಪುರಕ್ಕೆ 5 ಆಮ್ಲಜನಕ ಸಾಂದ್ರಕ ಹಸ್ತಾಂತರಿಸಿದ ಡಿಸಿಎಂ

ಬ್ಯಾಟರಾಯನಪುರಕ್ಕೆ 5 ಆಮ್ಲಜನಕ ಸಾಂದ್ರಕ ಹಸ್ತಾಂತರಿಸಿದ ಡಿಸಿಎಂ

14
0
Advertisement
bengaluru

ಬೆಂಗಳೂರು:

ಕೋವಿಡ್‌ ಸೋಂಕಿತರ ಪಾಲಿಗೆ ಆಪ್ತರಕ್ಷಕನಂತೆ ನೆರವಿಗೆ ಬರುತ್ತಿರುವ ʼಆಮ್ಲಜನಕ ಸಾಂದ್ರಕʼಗಳನ್ನು ಒದಗಿಸುವ ಕೆಲಸ ಮುಂದುವರಿದಿದ್ದು, ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಶುಕ್ರವಾರ ಬ್ಯಾಟರಾಯನಪುರ ಕ್ಷೇತ್ರಕ್ಕೆ 5 ಆಮ್ಲಜನಕ ಸಾಂದ್ರಕಗಳನ್ನು ಹಸ್ತಾಂತರಿಸಿದರು.

ಬಿಬಿಎಂಪಿ ಮಾಜಿ ಸದಸ್ಯರಾದ ಮುನೇಂದ್ರ ಕುಮಾರ್‌ ಅವರಿಗೆ ಐದು ಸಾಂದ್ರಕಗಳನ್ನು ಕೊಟ್ಟಿದ್ದು ಅವರು ಬ್ಯಾಟರಾಯನಪುರ ಕ್ಷೇತ್ರದಲ್ಲಿ‌ ಬಳಕೆ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಸೋಂಕಿತರಿಗೆ ಆಮ್ಲಜನಕ ಸಾಂದ್ರಕಗಳಿಂದ ಹೆಚ್ಚು ಸಹಾಯ ಆಗುತ್ತಿದೆ. ತುರ್ತಾಗಿ ಎಲ್ಲಿಗೆ ಬೇಕಾದರೂ ಕೊಂಡೊಯ್ದು ಸುಲಭವಾಗಿ ಬಳಸಬಹುದಾಗಿದೆ. ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಮನೆ ಬಾಗಿಲಿಗೆ ಇವುಗಳನ್ನು ಒದಗಿಸುವ ಕೆಲಸ ಆಗುತ್ತಿದೆ. ರಾಜ್ಯದ ಇತರ ಕಡೆಗೂ ಹೆಚ್ಚಿನ ಅನುಕೂಲ ಆಗಲಿ ಎಂದು ವೈಯಕ್ತಿಕವಾಗಿ ಇವುಗಳನ್ನು ನೀಡುತ್ತಿರುವುದಾಗಿ ಹೇಳಿದರು.

bengaluru bengaluru

bengaluru

LEAVE A REPLY

Please enter your comment!
Please enter your name here