ಕೊರಟಗೆರೆ/ತುಮಕೂರು:
ಜಿಲ್ಲೆಯ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ಪ್ರಚಾರದ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಮೇಲೆ ಕಲ್ಲೆಸೆದಿರುವಂತಹ ಘಟನೆ ನಡೆದಿದೆ.
ಪ್ರಚಾರದ ವೇಳೆಯಲ್ಲಿ ಡಾ. ಜಿ. ಪರಮೇಶ್ವರ್ ಅವರನ್ನು ಎತ್ತಿಕೊಂಡು ಕಾರ್ಯಕರ್ತರು ಕುಣಿಯುತ್ತಿದ್ದಾಗ ಗುಂಪಿನಲ್ಲಿದ್ದ ದುಷ್ಕರ್ಮಿ ಕಲ್ಲು ತೂರಾಟ ನಡೆಸಿರುವುದಾಗಿ ವರದಿಯಾಗಿದೆ.
ಕೂಡಲೇ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದ ಕಾನೂನು ಸುವ್ಯವಸ್ಥೆಯನ್ನ ಯಾವ ಹಂತಕ್ಕೆ ತಂದಿಟ್ಟಿದ್ದೀರಿ @JnanendraAraga ಅವರೇ,@siddaramaiah ಅವರ ಮೇಲೆ ಮೊಟ್ಟೆ ದಾಳಿ ಮಾಡಿದವರ ಮೇಲೆ ಕ್ರಮವಿಲ್ಲ,@DrParameshwara ಅವರಿಗೆ ಸೂಕ್ತ ರಕ್ಷಣೆ ಇಲ್ಲ.
— Karnataka Congress (@INCKarnataka) April 28, 2023
ಇದೆಲ್ಲವೂ ಬಿಜೆಪಿಯ ವೈಫಲ್ಯವೋ, ಷಡ್ಯಂತ್ರವೋ?
ಅಮಿತ್ ಶಾ ಅವರ ನಿರ್ದೇಶನದಂತೆ "ಗಲಭೆಯುಕ್ತ ಕರ್ನಾಟಕ" ಮಾಡಲು ತಯಾರಿಯೇ? pic.twitter.com/CiYCgonBE2
ಈ ಬಾರಿ ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಜೆಡಿಎಸ್ ನಿಂದ ಸುಧಾಕರ್ ಲಾಲ್ ಸ್ಪರ್ಧಿಸಿದ್ದು, ಕ್ಷೇತ್ರದಲ್ಲಿ ತ್ರಿಕೋನ ಪೈಪೋಟಿ ಏರ್ಪಟ್ಟಿದೆ.