Home ರಾಜಕೀಯ ದುಷ್ಕರ್ಮಿಯಿಂದ ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್ ತಲೆಗೆ ಕಲ್ಲೇಟು

ದುಷ್ಕರ್ಮಿಯಿಂದ ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್ ತಲೆಗೆ ಕಲ್ಲೇಟು

69
0
Karnataka: Former DCM Dr. G. Parameshwar injured in stone pelting

ಕೊರಟಗೆರೆ/ತುಮಕೂರು:

ಜಿಲ್ಲೆಯ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ಪ್ರಚಾರದ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ​ ಮೇಲೆ ಕಲ್ಲೆಸೆದಿರುವಂತಹ ಘಟನೆ ನಡೆದಿದೆ.

ಪ್ರಚಾರದ ವೇಳೆಯಲ್ಲಿ ಡಾ. ಜಿ. ಪರಮೇಶ್ವರ್ ಅವರನ್ನು ಎತ್ತಿಕೊಂಡು ಕಾರ್ಯಕರ್ತರು ಕುಣಿಯುತ್ತಿದ್ದಾಗ ಗುಂಪಿನಲ್ಲಿದ್ದ ದುಷ್ಕರ್ಮಿ ಕಲ್ಲು ತೂರಾಟ ನಡೆಸಿರುವುದಾಗಿ ವರದಿಯಾಗಿದೆ.

Karnataka: Former DCM Dr. G. Parameshwar injured in stone pelting

ಕೂಡಲೇ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಾರಿ ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಜೆಡಿಎಸ್ ನಿಂದ ಸುಧಾಕರ್ ಲಾಲ್ ಸ್ಪರ್ಧಿಸಿದ್ದು, ಕ್ಷೇತ್ರದಲ್ಲಿ ತ್ರಿಕೋನ ಪೈಪೋಟಿ ಏರ್ಪಟ್ಟಿದೆ.

LEAVE A REPLY

Please enter your comment!
Please enter your name here