Home ಬೆಂಗಳೂರು ನಗರ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡ ಪಾವತಿಗೆ ಮತ್ತೆ 50% ರಿಯಾಯಿತಿಯನ್ನು ಪ್ರಕಟಿಸಿದೆ

ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡ ಪಾವತಿಗೆ ಮತ್ತೆ 50% ರಿಯಾಯಿತಿಯನ್ನು ಪ್ರಕಟಿಸಿದೆ

24
0
Halasuru traffic Rs 23000 penalty collected

ಬೆಂಗಳೂರು:

ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಸಹಿ ಸುದ್ದಿ ನೀಡಿದ್ದು, ಬಾಕಿ ದಂಡ ಪಾವತಿಗೆ ಮತ್ತೆ ಶೇ. 50ರಷ್ಟು ರಿಯಾಯಿತಿ ಘೋಷಣೆ ಮಾಡಿದೆ.

ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ರಿಯಾಯಿತಿ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 9ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದೆ.

ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ. 50 ರಷ್ಟು ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ಸಾರಿಗೆ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿಂದೆಯೂ 2 ಬಾರಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ನೀಡಿತ್ತು. ನಂತರ ರಾಜ್ಯ ವಿಧಾನಸಭೆ ಘೋಷಣೆಯಾಗಿದ್ದು, ರಿಯಾಯಿತಿ ದರದ ದಂಡ ಪಾವತಿ ಅವಕಾಶ ಸ್ಥಗಿತಗೊಂಡಿತ್ತು.

LEAVE A REPLY

Please enter your comment!
Please enter your name here