Home ಶಿಕ್ಷಣ ರಾಜ್ಯದ ಶಾಲೆಗಳ ರಜಾ ಅವಧಿ ಘೋಷಣೆ: ಸುರೇಶ್ ಕುಮಾರ್

ರಾಜ್ಯದ ಶಾಲೆಗಳ ರಜಾ ಅವಧಿ ಘೋಷಣೆ: ಸುರೇಶ್ ಕುಮಾರ್

139
0

ಶೈಕ್ಷಣಿಕ ವರ್ಷ 2021-2022, ಜುನ್ 15, ರಿಂದ 8-10 ನೇ ತರಗತಿಗಳು‌ ಪ್ರಾರಂಭವಾಗಲಿವೆ ಎಂದು ಹೇಳಿದ ಸಚಿವರು

ಬೆಂಗಳೂರು:

ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ‌ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿರುವ ಬಗ್ಗೆ ಖಚಿತ‌ಪಡಿಸಿಧ ಸಚಿವರು ಪ್ರಾಥಮಿಕ ಶಾಲೆಗಳಿಗೆ ಹಿಂದೆ ತಿಳಿಸಲಾದಂತೆ 14.06.2021ರವರೆಗೆ ಬೇಸಿಗೆ ರಜೆ, ಪ್ರೌಢ ಶಾಲೆಗಳಿಗೆ 27.04.2021 ರಿಂದ 31.05.2021ರವರೆಗೆ ಬೇಸಿಗೆ ರಜೆ ಘೋಷಿಸಲಾಗಿದೆ‌ ಎಂದಿದ್ದಾರೆ.

Screenshot 220
Screenshot 221

ಪ್ರೌಢಶಾಲಾ‌ ಶಿಕ್ಷಕರು ರಜೆ ಅವಧಿಯಲ್ಲಿ‌ ಎಸ್.ಎಸ್.ಎಲ್.ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು, ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ. ಅದನ್ನು ಶಿಕ್ಷಕರು ಪರಿಪಾಲಿಸಬೇಕೆಂದಿದ್ದಾರೆ.

01.06.2021ರಿಂದ 14.06.2021ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪುನರ್ಮನನ ತರಗತಿಗಳು ನಡೆಯಲಿವೆ.

2021-2022 ಶೈಕ್ಷಣಿಕ ವರ್ಷ 15.06.2021 ರಿಂದ 8-10 ನೇ ತರಗತಿಗಳು‌ ಪ್ರಾರಂಭವಾಗಲಿವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here