ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವಾಲಯಕ್ಕೆ ಮೂವರು ಮಾಧ್ಯಮ ಕಾರ್ಯದರ್ಶಿಗಳ ನೇಮಕ; ರಾಜ್ಯ ಸರ್ಕಾರ ಆದೇಶ
ಬೆಂಗಳೂರು, ಜುಲೈ 8: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವಾಲಯಕ್ಕೆ ಮೂರು ಮಂದಿ ಮಾಧ್ಯಮ ಕಾರ್ಯದರ್ಶಿಗಳನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-6) ವತಿಯಿಂದ ವಿಧಾನಸೌಧದಿಂದ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಮುಖ್ಯಮಂತ್ರಿ ಸಚಿವಾಲಯದಲ್ಲಿ ಮಾಧ್ಯಮ ಕಾರ್ಯದರ್ಶಿಗಳಾಗಿ ಕೆಳಕಂಡ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಅಧಿಸೂಚನೆಯಂತೆ,
- ಶ್ರೀ ಪಿ. ತ್ಯಾಗರಾಜ್, ಬೆಂಗಳೂರು ಅವರನ್ನು ಮಾನ್ಯ ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ–1 ಆಗಿ ನೇಮಕ ಮಾಡಲಾಗಿದೆ.
- ಶ್ರೀ ಆರ್. ಜಯಪ್ರಕಾಶ್, ಬೆಂಗಳೂರು ಅವರನ್ನು ಮಾನ್ಯ ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ–2 ಆಗಿ ನೇಮಕ ಮಾಡಲಾಗಿದೆ.
- ಶ್ರೀ ರಾಘವೇಂದ್ರ ಭಟ್, ಬೆಂಗಳೂರು ಅವರನ್ನು ಮಾನ್ಯ ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ–3 ಆಗಿ ನೇಮಕ ಮಾಡಲಾಗಿದೆ.
ಈ ನೇಮಕಾತಿಗಳು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಈ ಸಂಬಂಧದ ಅಧಿಸೂಚನೆಯನ್ನು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಹಾಗೂ ಅವರ ಹೆಸರಿನಲ್ಲಿ ಹೊರಡಿಸಲಾಗಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-6)ಯ ಸರ್ಕಾರದ ಅಧೀನ ಕಾರ್ಯದರ್ಶಿ ಗಾಯತ್ರಿ ಜಿ.ಎನ್. ಅವರು ಸಹಿ ಮಾಡಿದ್ದಾರೆ.