ಬೆಂಗಳೂರು:
ಬೆಂಗಳೂರು ಉತ್ತರ ಜಿಲ್ಲೆಯಲ್ಲಿನ ಶ್ರೀ ಚೈತನ್ಯ ಪದವಿ ಪೂರ್ವ ಕಾಲೇಜು, ನಂ.79, 1ನೇ ಮುಖ್ಯರಸ್ತೆ, ಶೇಷಾದ್ರಿಪುರಂ, ಬೆಂಗಳೂರು (ಎಎನ್-741) ಈ ಕಾಲೇಜಿನ ಶೈಕ್ಷಣಿಕ ಮಾನ್ಯತೆಯನ್ನು 2020-21ನೇ ಸಾಲಿನಿಂದ ಹಿಂಪಡೆದು ನಿರ್ದೇಶನಾಲಯದಿಂದ ಆದೇಶವನ್ನು ಹೊರಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕಾಲೇಜಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಯಾವುದೇ ಪೋಷಕರು/ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ದಾಖಲಾತಿ ಆಗಬಾರದೆಂದು ಸೂಚಿಸಲಾಗಿದೆ. ಒಂದು ವೇಳೆ ದಾಖಲಾತಿ ಮಾಡಿಸಿದಲ್ಲಿ ಮುಂದಿನ ಆಗುಹೋಗುಗಳಿಗೆ ಇಲಾಖೆಯು ಜವಾಬ್ದಾರಿಯಾಗಿರುವುದಿಲ್ಲ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.