Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಬೆಂಗಳೂರು ನಗರ

ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Vighnesh Pawar June 24, 2023 3:30 PM
Karnataka government is strong enough to face all problems: Chief Minister Siddaramaiah

Karnataka government is strong enough to face all problems: Chief Minister Siddaramaiah

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೀಜ, ರಸಗೊಬ್ಬರ, ಔಷಧದ ಸಮೇತ ಕೃಷಿ ಇಲಾಖೆ ಸರ್ವ ಸನ್ನದ್ದವಾಗಿದೆ

ಬೆಂಗಳೂರು:

ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸಲು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದೆ. ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದು, ಬಿತ್ತನೆ ಈಗಾಗಲೇ ಕೆಲವೆಡೆ ಪ್ರಾರಂಭವಾಗಿದೆ. ಇನ್ನು ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಈಗಾಗಲೇ 2 ಬಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ಕರೆದು ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಬಿತ್ತನೆಗೆ ಸಿದ್ಧ

ಮಳೆ ಯಾವಾಗ ಬಂದರೂ ಬಿತ್ತನೆ ಮಾಡಲು ತಯಾರಾಗಿದ್ದೇವೆ. ಕೃಷಿ ಇಲಾಖೆ ಬೀಜ, ಗೊಬ್ಬರ ಹಾಗೂ ಔಷಧಿಗಳನ್ನು ಸಂಗ್ರಹಿಸಿ ಸರ್ವಸನ್ನದ್ದವಾಗಿದೆ ಎಂದರು.

ಬಜೆಟ್ ನಂತರ ಪರಿಶೀಲನೆ

ಸಣ್ಣ ಕೈಗಾರಿಕೆಗಳು ಹಾಗೂ ಕಾಸಿಯಾ ಪ್ರತಿನಿಧಿಗಳೊಂದಿಗೆ ನಿನ್ನೆ ನಡೆದ ಚರ್ಚೆಯಲ್ಲಿ ಅವರು ತಮ್ಮ ಸಮಸ್ಯೆಗಳನ್ನು ತಿಳಿಸಿದ್ದಾರೆ. ಬಜೆಟ್ ಮಂಡನೆಯ ನಂತರ ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಲಾಗಿದೆ ಎಂದರು.

ಕೈಗಾರಿಕೆಗಳಿಗೆ ಒಂಭತ್ತು ತಿಂಗಳ ವಿದ್ಯುತ್ ತೆರಿಗೆ ವಿಧಿಸಲಾಗಿದೆ. ಇದರಿಂದ ತಮಗೆ ಹೊರೆಯಾಗಿದೆ ಎಂದು ಕೈಗಾರಿಕೋದ್ಯಮಿಗಳು ತಿಳಿಸಿದ್ದಾರೆ. ದರ ಪರಿಷ್ಕರಣೆ ನಮ್ಮ ಸರ್ಕಾರದ ಅವಧಿಯಲ್ಲಿ ಆಗಿದ್ದಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದು. ದರ ಪರಿಷ್ಕರಣೆಯನ್ನು ಪ್ರತಿ ವರ್ಷ ಕೆ.ಇ. ಆರ್.ಸಿ ಮಾಡುತ್ತದೆ. ದರ ಏರಿಕೆಗೂ ನಮ್ಮ ಸರ್ಕಾರಕ್ಕೂ ಸಂಬಂಧವಿಲ್ಲ. ನಾವೂ ಕೂಡ ಅವರಿಗೆ ಎಷ್ಟು ಮಾಡಬೇಕೆಂದು ಮನವಿ ಸಲ್ಲಿಸಿರುತ್ತೇವೆ. ಅದೊಂದು ಸ್ವಾಯತ್ತ ಸಂಸ್ಥೆಯಾಗಿದೆ ಎಂದರು.

ಹಾಲಿನ ದರ ಹೆಚ್ಚಳದ ಕುರಿತಂತೆ ಇರುವ ಪ್ರಸ್ತಾವನೆ ಬಗ್ಗೆ ಸಂಬಂಧಪಟ್ಟವರಿಗೆ ಮಾತನಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಬಡವರ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ತೊಂದರೆ

ಈಗಾಗಲೇ ತಿಳಿಸಿರುವಂತೆ ಬಡವರ ಕಾರ್ಯಕ್ರಮಕ್ಕೆ ತೊಂದರೆ ನೀಡಬೇಕೆಂದು ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಅವರ ಬಳಿ ಲಕ್ಷಗಟ್ಟಲೆ ಟನ್ ಅಕ್ಕಿಯಿದೆ. ಖಾಸಗಿಯವರಿಗೆ ಹರಾಜು ಮಾಡುತ್ತಾರೆ, ಆದರೆ ರಾಜ್ಯಗಳಿಗೆ ನೀಡುವುದಿಲ್ಲ ಎನ್ನುತ್ತಾರೆ. ಹಣ ನೀಡಿದರೂ ಕೊಡುವುದಿಲ್ಲ. 36.70 ರೂ. ಗಳ ವೆಚ್ಚದಲ್ಲಿ 1 ಕೆಜಿ ಅಕ್ಕಿ ಪಡೆಯಬಹುದು. ದ್ವೇಷದ ರಾಜಕಾರಣ ಮಾಡುವವರನ್ನು ಬಡವರ ವಿರೋಧಿ ಎನ್ನಬೇಕು ಎಂದರು.

ಧರಣಿ ಮಾಡಲು ನೈತಿಕ ಹಕ್ಕಿಲ್ಲ

ಬಿ.ಎಸ್.ಯಡಿಯೂರಪ್ಪ ಅವರು ಅಕ್ಕಿ ನೀಡದಿದ್ದರೆ ಧರಣಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರಿಗೆ ಧರಣಿ ಮಾಡುವ ಸ್ವಾತಂತ್ರ್ಯವಿದೆ. ಆದರೆ ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಅಕ್ಕಿ ಖರೀದಿ: ಸರ್ಕಾರಿ ಏಜೆನ್ಸಿಗಳೊಂದಿಗೆ ಇಂದು ಮಾತುಕತೆ
ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ ಒಂದರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ.ಅಕ್ಕಿಯನ್ನೂ ನೀಡಬೇಕೆಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ. 2.29 ಲಕ್ಷ ಮೆಟ್ರಿಕ್ ಟನ್ ಎಲ್ಲಿಯೂ ದೊರೆಯುತ್ತಿಲ್ಲ. ಎಲ್ಲಾ ರಾಜ್ಯದವರೂ ಪೂರ್ಣಪ್ರಮಾಣದ ಅಕ್ಕಿ ದೊರೆಯುತ್ತಿಲ್ಲವಾದ್ದರಿಂದ ಬೇರೆ ಸರ್ಕಾರಿ ಏಜೆನ್ಸಿಗಳಿಂದ ಎನ್.ಸಿ.ಸಿ.ಎಫ್ ನಿಂದ ಕೇಂದ್ರೀಯ ಭಂಡಾರ್, ನ್ಯಾಫೆಡ್ ಸಂಸ್ಥೆಗಳಿಂದ ದರಪಟ್ಟಿ ಕರೆಯಲಾಗಿದ್ದು, ಮಾತುಕತೆ ನಡೆದಿದೆ. ಇಂದು 3.00 ಗಂಟೆಗೆ ಮಾತುಕತೆ ನಡೆಯಲಿದ್ದು ಎಷ್ಟು ಅಕ್ಕಿ, ದರ ಎನ್ನುವ ಬಗ್ಗೆ ತೀರ್ಮಾನ ಮಾಡಲಾಗುವುದು. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಪಡೆಯಲು ಟೆಂಡರ್ ಕರೆಯಬೇಕು. ಜೋಳ, ರಾಗಿ ವಿತರಣೆ 6 ತಿಂಗಳಿಗಾಗುವಷ್ಟಿದೆ. 2 ಕೆಜಿಯಂತೆ ನೀಡಬಹುದು. ಇನ್ನೂ 3 ಕೆಜಿ ಅಕ್ಕಿ ನೀಡಬೇಕಿದೆ. ಇಡೀ ವರ್ಷ ನೀಡುವಷ್ಟು ರಾಗಿ, ಜೋಳವಿಲ್ಲ ಎಂದರು.

About the Author

Vighnesh Pawar

Subscriber

View All Posts

Post navigation

Previous: ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳಿನ್‍ಕುಮಾರ್ ಕಟೀಲ್
Next: ಶಾಸಕರಿಗೆ ತರಬೇತಿ ಹಿನ್ನೆಲೆ ವಿಜಯನಗರ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆ ಮುಂದೂಡಿಕೆ: ಸಚಿವ ಜಮೀರ್ ಅಹಮದ್

Related Stories

ತ್ಯಾಜ್ಯ ಮತ್ತು ಅವಶೇಷಗಳ ರಾಶಿಯ ಪಕ್ಕದ ರಸ್ತೆಯಲ್ಲಿ ಪರಿಶೀಲನೆಯ ವೇಳೆ ನಡೆದು ಹೋಗುತ್ತಿರುವ ಅಧಿಕಾರಿಗಳು
  • ಬೆಂಗಳೂರು ನಗರ

ಬನ್ನಪ್ಪ ಪಾರ್ಕ್, ಓಕಳೀಪುರಂ ಕಾರಿಡಾರ್ ಪರಿಶೀಲನೆ: ಕಾಮಗಾರಿ ತ್ವರಿತಗೊಳಿಸಲು ಅಪರ ಆಯುಕ್ತರ ಸೂಚನೆ

The Bengaluru Live November 23, 2026 8:54 AM
ಫೋನ್-ಇನ್ ಕಾರ್ಯಕ್ರಮದ ವೇಳೆ ಸಭೆ ಮೇಜಿನ ಬಳಿ ಟೇಬಲ್ ಫೋನ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿ ಮತ್ತು ಪಕ್ಕದಲ್ಲಿ ಕುಳಿತಿರುವ ಮಹಿಳೆ
  • ಬೆಂಗಳೂರು ನಗರ

ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್

The Bengaluru Live November 23, 2026 8:19 AM
ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM

Latest Post

ಬನ್ನಪ್ಪ ಪಾರ್ಕ್, ಓಕಳೀಪುರಂ ಕಾರಿಡಾರ್ ಪರಿಶೀಲನೆ: ಕಾಮಗಾರಿ ತ್ವರಿತಗೊಳಿಸಲು ಅಪರ ಆಯುಕ್ತರ ಸೂಚನೆ ತ್ಯಾಜ್ಯ ಮತ್ತು ಅವಶೇಷಗಳ ರಾಶಿಯ ಪಕ್ಕದ ರಸ್ತೆಯಲ್ಲಿ ಪರಿಶೀಲನೆಯ ವೇಳೆ ನಡೆದು ಹೋಗುತ್ತಿರುವ ಅಧಿಕಾರಿಗಳು
  • ಬೆಂಗಳೂರು ನಗರ

ಬನ್ನಪ್ಪ ಪಾರ್ಕ್, ಓಕಳೀಪುರಂ ಕಾರಿಡಾರ್ ಪರಿಶೀಲನೆ: ಕಾಮಗಾರಿ ತ್ವರಿತಗೊಳಿಸಲು ಅಪರ ಆಯುಕ್ತರ ಸೂಚನೆ

November 23, 2026 8:54 AM
ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್ ಫೋನ್-ಇನ್ ಕಾರ್ಯಕ್ರಮದ ವೇಳೆ ಸಭೆ ಮೇಜಿನ ಬಳಿ ಟೇಬಲ್ ಫೋನ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿ ಮತ್ತು ಪಕ್ಕದಲ್ಲಿ ಕುಳಿತಿರುವ ಮಹಿಳೆ
  • ಬೆಂಗಳೂರು ನಗರ

ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್

November 23, 2026 8:19 AM
ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

November 22, 2026 9:22 PM
ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

November 22, 2026 2:01 PM
ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 22, 2026 11:32 AM
ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

November 22, 2026 11:16 AM

ನೀವು ತಪ್ಪಿಸಿಕೊಂಡಿರಬಹುದು

ತ್ಯಾಜ್ಯ ಮತ್ತು ಅವಶೇಷಗಳ ರಾಶಿಯ ಪಕ್ಕದ ರಸ್ತೆಯಲ್ಲಿ ಪರಿಶೀಲನೆಯ ವೇಳೆ ನಡೆದು ಹೋಗುತ್ತಿರುವ ಅಧಿಕಾರಿಗಳು
  • ಬೆಂಗಳೂರು ನಗರ

ಬನ್ನಪ್ಪ ಪಾರ್ಕ್, ಓಕಳೀಪುರಂ ಕಾರಿಡಾರ್ ಪರಿಶೀಲನೆ: ಕಾಮಗಾರಿ ತ್ವರಿತಗೊಳಿಸಲು ಅಪರ ಆಯುಕ್ತರ ಸೂಚನೆ

The Bengaluru Live November 23, 2026 8:54 AM
ಫೋನ್-ಇನ್ ಕಾರ್ಯಕ್ರಮದ ವೇಳೆ ಸಭೆ ಮೇಜಿನ ಬಳಿ ಟೇಬಲ್ ಫೋನ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿ ಮತ್ತು ಪಕ್ಕದಲ್ಲಿ ಕುಳಿತಿರುವ ಮಹಿಳೆ
  • ಬೆಂಗಳೂರು ನಗರ

ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್

The Bengaluru Live November 23, 2026 8:19 AM
ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

The Bengaluru Live November 22, 2026 9:22 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

The Bengaluru Live November 22, 2026 2:01 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬನ್ನಪ್ಪ ಪಾರ್ಕ್, ಓಕಳೀಪುರಂ ಕಾರಿಡಾರ್ ಪರಿಶೀಲನೆ: ಕಾಮಗಾರಿ ತ್ವರಿತಗೊಳಿಸಲು ಅಪರ ಆಯುಕ್ತರ ಸೂಚನೆ
  • ಘನತ್ಯಾಜ್ಯ ನಿರ್ವಹಣೆಗೆ ಉತ್ತರ ನಗರ ಪಾಲಿಕೆಯಿಂದ ಮೈಕ್ರೋ-ಪ್ಲಾನ್; ಪ್ರತಿ ಮಂಗಳವಾರ ಫೋನ್-ಇನ್
  • ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ
  • ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ
©Copyright 2025 The Bengaluru Live All rights reserved. | MoreNews by AF themes.