
ಬೆಂಗಳೂರು:
ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಪ್ರಸಕ್ತ ವರ್ಷದ ಬಜೆಟ್ ಘೋಷಣೆಯಂತೆ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.
“ಒಕ್ಕಲಿಗ ಸಮುದಾಯದ ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ರೂಪಿಸಲಾಗಿರುವ ಈ ನಿಗಮಕ್ಕೆ ಪೂರಕ ಹುದ್ದೆಗಳನ್ನು ಸೃಜಿಸುವ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಮುಖ್ಯಮಂತ್ರಿ @BSYBJP ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳು,” ಎಂದು ಉಪಮುಖ್ಯಮಂತ್ರಿಗಳಾದ ಡಾ. ಅಶ್ವತ್ ನಾರಾಯಣ್ ಅವರು ಟ್ವೀಟ್ ಮಾಡಿದ್ದಾರೆ.
ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
— Dr. Ashwathnarayan C. N. (@drashwathcn) July 17, 2021
ಒಕ್ಕಲಿಗ ಸಮುದಾಯದ ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ರೂಪಿಸಲಾಗಿರುವ ಈ ನಿಗಮಕ್ಕೆ ಪೂರಕ ಹುದ್ದೆಗಳನ್ನು ಸೃಜಿಸುವ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಮುಖ್ಯಮಂತ್ರಿ @BSYBJP ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳು. pic.twitter.com/Soww6pZBkh
ಒಕ್ಕಲಿಗ ಅಭಿವೃದ್ಧಿ ನಿಗಮದ ಚಟುವಟಿಕೆಗಳಿಗೆ ₹ 500 ಕೋಟಿ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್‌ನಲ್ಲಿ ಪ್ರಕಟಿಸಿದ್ದರು.