ಬೆಂಗಳೂರು:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣಾ ಅವರ ಸದಾಶಿವನಗರದಲ್ಲಿನ ನಿವಾಸದಲ್ಲಿ ಮನೆಗೆ ಭೇಟಿ ನೀಡಿ ನಾಡ ಹಬ್ಬ ದಸರಾ ಮಹೋತ್ಸವ – 2021ರ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಪ್ರೇಮಾ ಕೃಷ್ಣ ಉಪಸ್ಥಿತರಿದ್ದರು.
ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಗೌರವ ನೀಡಿರುವುದು ನನ್ನ ಬಾಳಿನ ಸುದೈವ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಪ್ರತಿಪಾದಿಸಿದ್ದಾರೆ.
ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕಂದಾಯ ಸಚಿವ ಅಶೋಕ್, ಮೈಸೂರು ಮೇಯರ್ ಸುನಂದಾ ಪಾಲನೇತ್ರ ಅವರಿಂದ 2021ರ ಸಾಲಿನ ಮೈಸೂರು ದಸರಾ ಉದ್ಘಾಟನೆಯ ಆಮಂತ್ರಣ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರೇಮಾ ಕೃಷ್ಣ, ಕಂದಾಯ ಸಚಿವ @RAshokaBJP, ಸಹಕಾರ ಸಚಿವ @STSomashekarMLA, ಸಂಸದ @mepratap, ಮೈಸೂರು ಮೇಯರ್ ಸುನಂದಾ ಪಾಲನೇತ್ರ ಮತ್ತಿತರರು ಉಪಸ್ಥಿತರಿದ್ದರು. (2/2)
— CM of Karnataka (@CMofKarnataka) October 2, 2021
ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ನಾಡಿನ ಸರ್ವತೋಮುಖ ಅಭಿವೃದ್ಧಿಯಾಗಲಿ. ನನ್ನ ವ್ಯಕ್ತಿತ್ವ ರೂಪಿಸಸಲು ರಾಮಕೃಷ್ಣ ಆಶ್ರಮ ಬಹಳ ಪ್ರಭಾವ ಬೀರಿದೆ. ನನ್ನ ಶಾಲೆ ಮತ್ತು ಕಾಲೇಜು ದಿನಗಳನ್ನು ಮೈಸೂರಿನಲ್ಲಿ ಕಳೆದಿದ್ದೆ. ಇದೀಗ ದಸರಾ ಉದ್ಘಾಟನೆ ಮಾಡುವ ಸುಯೋಗ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.ಇಂತಹ ಅವಕಾಶ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ಹಾಗೂ ಸಚಿವ ಸಂಪುಟದ ಎಲ್ಲರಿಗೂ ಅಭಿನಂದನೆಗಳುಎಂದು ಹೇಳಿದರು.