ಬೆಂಗಳೂರು:
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಂಗಳವಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶ ಹೊರಡಿಸಿದೆ.
ನೌಕರರ ಮೂಲ ವೇತನದ ಶೇ. 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸೂಚಿಸಲಾಗಿದೆ. ಈ ಮೂಲಕ ಕಳೆದ ಐದು ತಿಂಗಳ ತುಟ್ಟಿಭತ್ಯೆಯಲ್ಲಿ ಶೇಕಡಾ 4ರಷ್ಟು ಹೆಚ್ಚಳವನ್ನು ಪಡೆಯಲಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 4ಷ್ಟು ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಸರ್ಕಾರದ ಈ ಆದೇಶ ಸರ್ಕಾರಿ ನೌಕರರಲ್ಲಿ ಸಂತಸವನ್ನು ತಂದಿದೆ. ಈ ಪರಿಷ್ಕೃತ ತುಟ್ಟಿ ಭತ್ಯೆ 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2023ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಏರಿಕೆ ಮಾಡಲಾಗಿದೆ.