ಬೆಂಗಳೂರು : ರಾಜ್ಯ ಸರಕಾರವು ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಲೋಕಾಯುಕ್ತ ವಿಶೇಷ ತನಿಖಾ ತಂಡದ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರನ್ನು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರನ್ನು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಜೀತ್ ವಿ.ಜೆ. ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ಹಾಗೂ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿಯವರನ್ನು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.