
Karnataka government orders CID inquiry in washroom video case in udupi college
ಬೆಂಗಳೂರು:
ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಸೋಮವಾರ ಆದೇಶ ಹೊರಡಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿ.ಐ.ಡಿ ಗೆ ವಹಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪದ ಮೇಲೆ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮೂವರು ಆರೋಪಿಗಳು ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿ.ಐ.ಡಿ ಗೆ ವಹಿಸಿ ಆದೇಶಿಸಲಾಗಿದೆ.
— CM of Karnataka (@CMofKarnataka) August 7, 2023
– ಮುಖ್ಯಮಂತ್ರಿ @siddaramaiah pic.twitter.com/3aVKquZYQ6