Home ಬೆಂಗಳೂರು ನಗರ National e-Governance Award | ʼರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿʼ ಪಡೆದ ಕರ್ನಾಟಕ ಸರಕಾರ

National e-Governance Award | ʼರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿʼ ಪಡೆದ ಕರ್ನಾಟಕ ಸರಕಾರ

10
0

ಬೆಂಗಳೂರು : ಕೇಂದ್ರ ಸರಕಾರದಿಂದ ರಾಜ್ಯಕ್ಕೆ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಲಭಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ, ಈ ಪ್ರಶಸ್ತಿಯು ಜನಪರ ಕಾರ್ಯದ ನಮ್ಮ ಉತ್ಸಾಹವನ್ನು ನೂರ್ಮಡಿಗೊಳಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here