Home ಬೆಂಗಳೂರು ನಗರ ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ : ಸಿದ್ದರಾಮಯ್ಯ

ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ : ಸಿದ್ದರಾಮಯ್ಯ

6
0
ಫೈಲ್ ಚಿತ್ರ
bengaluru

ಬೆಂಗಳೂರು:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ತಮ್ಮ ನಿವಾಸದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸರ್ಕಾರದಲ್ಲಿ ಗೊಂದಲ ಮುಂದುವರಿದಿದೆ. ಈ ಸರ್ಕಾರ ಅವಧಿ ಪೂರ್ಣಗೊಳಿಸುವುದು ಅನುಮಾನ. ಯಾವುದೇ ಸಂದರ್ಭದಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ್, ರಾಮದಾಸ ಮತ್ತಿತರ ಶಾಸಕರು ದೆಹಲಿಗೆ ಹೋಗಿ ಬಂದು ಮಾಡುತ್ತಿದ್ದಾರೆ. ಹೀಗಾಗಿ ಈ ಸರ್ಕಾರ ಬಹಳ ದಿನ ಬಾಳುವುದಿಲ್ಲ.

bengaluru
bengaluru

LEAVE A REPLY

Please enter your comment!
Please enter your name here