Home ಕರ್ನಾಟಕ ರಾತ್ರಿ ಕರ್ಪ್ಯೂ ಹಿಂಪಡೆದ ರಾಜ್ಯ ಸರ್ಕಾರ : ಮುಖ್ಯಮಂತ್ರಿಗಳಿಂದ ಪ್ರಕಟಣೆ

ರಾತ್ರಿ ಕರ್ಪ್ಯೂ ಹಿಂಪಡೆದ ರಾಜ್ಯ ಸರ್ಕಾರ : ಮುಖ್ಯಮಂತ್ರಿಗಳಿಂದ ಪ್ರಕಟಣೆ

83
0
Advertisement
bengaluru

ಬೆಂಗಳೂರು:

ರಾಜ್ಯದ ಜನತೆಯ ವ್ಯಾಪರ ವಿರೋಧ,ಮಾಧ್ಯಮಗಳ ಟೀಕೆಯಿಂದ ಎಚ್ಚೆತ್ತಿರು ವ ರಾಜ್ಯ ಸರ್ಕಾರ ಇಂದಿನಿಂದ 9 ದಿನಗಳ ಕಾಲ ರಾಜ್ಯಾದ್ಯಂತ ಹೇರಿದ್ದ ರಾತ್ರಿ ಕರ್ಪ್ಯೂವನ್ನು ಹಿಂಪಡೆದಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು,ಬ್ರಿಟನ್ ಹಾಗೂ ಇತ ರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿ ಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕಫ್ರ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕಫ್ರ್ಯೂವಿನ ಅಗತ್ಯವಿಲ್ಲವೆಂಬಂತ ಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿ ಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕಫ್ರ್ಯೂವನ್ನು ಹಿಂಪಡೆಯಲು ತೀರ್ಮಾನಿ ಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

bengaluru bengaluru

ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು,ಮಾಸ್ಕ್ ಧರಿಸಿ,ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿ ಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಕೋರಿದೆ ಎಂದು ಅವರು ಮನವಿ ಮಾಡಿದ್ದಾರೆ. UNI


bengaluru

LEAVE A REPLY

Please enter your comment!
Please enter your name here