Home ಬೆಂಗಳೂರು ನಗರ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ:ರಾಜೀನಾಮೆ ಅಂಗೀಕರಿಸಿದ ರಾಜಪಾಲರು

ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ:ರಾಜೀನಾಮೆ ಅಂಗೀಕರಿಸಿದ ರಾಜಪಾಲರು

99
0
Advertisement
bengaluru

ಬೆಂಗಳೂರು:

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸರ್ಕಾರ ರಚನೆಯ ಎರಡನೇ ವರ್ಷದ ಸಂಭ್ರಮಾಚಾರಣೆ ಭಾಷಣದಲ್ಲಿ ಘೋಷಿಸಿದಂತೆ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದು,ರಾಜ್ಯಪಾಲರು ಯಡಿಯೂರಪ್ಪ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ರಾಜೀನಾಮೆ ಸಲ್ಲಿಸಿದ ಬಳಿಕ ರಾಜಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ,ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ನಿರ್ಧರಿಸಿದ್ದೆ. ಆದರೆ ಸರ್ಕಾರಕ್ಕೆ 2 ವರ್ಷವಾದ ಬಳಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದೆ. ನನ್ನ ರಾಜೀನಾಮೆಗೆ ಹೈಕಮಾಂಡ್ ಒತ್ತಡ ಹಾಕಿಲ್ಲ. ಸ್ವಯಂ ಪ್ರೇರಿತವಾಗಿಯೇ ರಾಜೀನಾಮೆ ನೀಡಿದ್ದೇನೆ ಎಂದರು.

Yediyurappas resignation letter
Yediyurappa cabinet dissolved
Yediyurappa resignation accepted

ಮುಂದಿನ ಸಿಎಂ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ, ಮುಂದಿನ ಸಿಎಂ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಯಾರೆ ಸಿಎಂ ಆದರೂ ನಾನು ಸಹಕಾರವನ್ನ ನೀಡುತ್ತೇನೆ. ಮುಂದಿನ ಸಿಎಂ ಹೆಸರನ್ನು ಸೂಚಿಸಲು ನಾನು ಹೋಗುವುದಿಲ್ಲ.ಇದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಜನಸೇವೆಗೆ ನನಗೆ ಅವಕಾಶ ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

bengaluru bengaluru

bengaluru

LEAVE A REPLY

Please enter your comment!
Please enter your name here