Home ಬೆಂಗಳೂರು ನಗರ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು

ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು

101
0
Quit India Karnataka Guv visits house of freedom fighters, honours them2
ಚಿತ್ರ ಮೂಲ: ಡಿಐಪಿಆರ್

“ಸ್ವಾತಂತ್ರ್ಯ ಹೋರಾಟಗಾರರ ಸನ್ಮಾನಿಸುವುದು ಆದ್ಯ ಕರ್ತವ್ಯ”

ಬೆಂಗಳೂರು:

ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಬೆಂಗಳೂರಿನಲ್ಲಿರುವ ಮೂವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ, ಸಿಹಿ ತಿನಿಸುವ ಮೂಲಕ ಗೌರವ ಸಲ್ಲಿಸಿದ್ದು, ಈ ವಿಶೇಷ ಕ್ಷಣಗಳಿಗೆ ಸಚಿವರುಗಳಾದ ಆರ್ ಅಶೋಕ್, ಅಶ್ವಥ್ ನಾರಾಯಣ್ ಸಾಕ್ಷಿಯಾದರು.

ಮಂಗಳವಾರ ಬೆಳಿಗ್ಗೆ ಮೊದಲಿಗೆ ಜೆಪಿನಗರದ ನಾಲ್ಕನೇ ಹಂತದ ಆಶ್ರಯ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಆರ್ ನಾರಾಯಣಪ್ಪ ಅವರ ಮನೆಗೆ ತೆರಳಿದ ಗೌರವಾನ್ವಿತ ರಾಜ್ಯಪಾಲರು, ಆರ್ ನಾರಾಯಣಪ್ಪ ಅವರಿಗೆ ಸನ್ಮಾನಿಸಿ, ಸಿಹಿ ತಿನಿಸಿದರು. ನಂತರ ಅವರಿಗೆ ಪ್ರಮಾಣ ಪತ್ರ ನೀಡಿ, ನಮನ ಸಲ್ಲಿಸಿದರು. ಈ ವೇಳೆ ಮಾನ್ಯ ಕಂದಾಯ ಸಚಿವರು ಶ್ರೀ ಆರ್ ಅಶೋಕ್ ಅವರು ಭಾಗಿಯಾಗಿದ್ದರು.

Quit India Karnataka Guv visits house of freedom fighters, honours them2
ಚಿತ್ರ ಮೂಲ: ಡಿಐಪಿಆರ್

ನಂತರ ಬನಶಂಕರಿ 3ನೇ ಹಂತದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಶಂಕರನಾರಾಯಣ ರಾವ್ ಅವರ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ, ಸಿಹಿ ತಿನಿಸಿದರು. ನಂತರ ಅವರೊಂದಿಗೆ ಕುಶಲೋಪರಿ ವಿಚಾರಿಸಿದ ರಾಜ್ಯಪಾಲರು, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾಗಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟ ತಮಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.

ತದ ನಂತರ ಮಲ್ಲೇಶ್ವಂರಂನಲ್ಲಿರುವ ಶ್ರೀ ನಾಗಭೂಷಣ್ ರಾವ್ ಅವರ ಮನೆಗೆ ತೆರಳಿದ ಗೌರವಾನ್ವಿತ ರಾಜ್ಯಪಾಲರು, ಶ್ರೀ ನಾಗಭೂಷಣ್ ರಾವ್ ಅವರನ್ನು ಸನ್ಮಾನಿಸಿ, ಸಿಹಿ ತಿನಿಸಿದರು. ನಂತರ ಅವರ ಕುಶಲೋಪರಿ ವಿಚಾರಿಸಿದರು. ಈ ವೇಳೆ ನಾಗಭೂಷಣ್ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಟಗಳಲ್ಲಿ ಭಾಗಿಯಾದ ಘಟನೆಗಳ ಬಗ್ಗೆ ವಿವರಿಸಿದರು. ಇದರ ಬಗ್ಗೆ ಮಾಹಿತಿ ಪಡೆದ ರಾಜ್ಯಪಾಲರು “ತಮ್ಮ ದೇಶ ಸೇವೆ ನಮ್ಮೆಲ್ಲರಿಗೆ ಸ್ಫೂರ್ತಿ. ನಿಮಗೆ ಹಾಗೂ ನಿಮ್ಮ ಕುಟುಂಬಗಳಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿ ತಲೆಬಾಗಿ ನಮಿಸಿದರು.

Quit India Karnataka Guv visits house of freedom fighters, honours them2
ಚಿತ್ರ ಮೂಲ: ಡಿಐಪಿಆರ್

ಈ ವೇಳೆ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನಮತ್ತು ತಂತ್ರಜ್ಞಾನ ಹಾಗೂ ಜೀವನೋಪಾಯ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಜಿಲ್ಲಾಧಿಕಾರಿ ಶ್ರೀನಿವಾಸ್ ಸೇರಿದಂತೆ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here