Home ಆರೋಗ್ಯ ಬ್ಲ್ಯಾಕ್‌ ಫಂಗಸ್‌: ವರದಿ ಬಳಿಕ ಚಿಕಿತ್ಸಾ ವಿಧಾನದ ಬಗ್ಗೆ ತೀರ್ಮಾನ : ಡಾ.ಕೆ. ಸುಧಾಕರ್‌

ಬ್ಲ್ಯಾಕ್‌ ಫಂಗಸ್‌: ವರದಿ ಬಳಿಕ ಚಿಕಿತ್ಸಾ ವಿಧಾನದ ಬಗ್ಗೆ ತೀರ್ಮಾನ : ಡಾ.ಕೆ. ಸುಧಾಕರ್‌

32
0
Sudhakar

ಬೆಂಗಳೂರು:

ಬ್ಲ್ಯಾಕ್‌ ಫಂಗಸ್‌ ಕುರಿತು ಸಂಪೂರ್ಣವಾಗಿ ಅಧ್ಯಯನ ಮಾಡಿ ಎರಡು ದಿನಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಲಾಗಿದ್ದು, ವರದಿ ಬಂದ ನಂತರ ಚಿಕಿತ್ಸಾ ವಿಧಾನದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳ ತಾಲ್ಲೂಕು ಆಸ್ಪತ್ರೆಗಳಲ್ಲಿನ ಚಿಕಿತ್ಸಾ ವ್ಯವಸ್ಥೆಯ ಪರಿಶೀಲನೆಗೆ ಬುಧವಾರ ಬೆಳಿಗ್ಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವೆಡೆ ಕೋವಿಡ್‌ ನಂತರ ಬ್ಲ್ಯಾಕ್‌ ಫಂಗಸ್‌ ಪತ್ತೆಯಾಗಿದೆ. ಈ ಕುರಿತು ಪರಿಪೂರ್ಣವಾದ ವರದಿ ಕೈಸೇರಿದ ನಂತರ ಸರ್ಕಾರ ಯಾವ ನಿಲುವು ಹೊಂದುತ್ತದೆ ಎಂಬುದರ ಕುರಿತು ಇನ್ನು ಎರಡು ದಿನಗಳ ಒಳಗಾಗಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಈಗಾಗಲೇ ನಗರ ಪ್ರದೇಶಗಳಿಂದ ಹಳ್ಳಿಗಳ ಕಡೆಗೆ ಸೋಂಕು ಹರಡುತ್ತಿರುವುದು ತಿಳಿದು ಬಂದಿದೆ. ಆದ್ದರಿಂದಲೇ ಜಿಲ್ಲಾ, ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಹೆಚ್ಚಿಸಲಾಗುತ್ತಿದ್ದು, ಕೋವಿಡ್‌ ಕೇರ್‌ ಸೆಂಟರ್‌ಗಳು, ಸ್ಟೆಪ್‌ಡೌನ್‌ ಆಸ್ಪತ್ರೆಗಳನ್ನು ಪ್ರಾರಂಭಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

LEAVE A REPLY

Please enter your comment!
Please enter your name here