ಬೆಂಗಳೂರು:
ರಾಜ್ಯದ 5762 ಗ್ರಾಮ ಪಂಚಾಯತ್ ಗಳಿಗೆ ಡಿಸೆಂಬರ್ 22 ಮತ್ತು 27ರಂದು ಎರಡು ಹಂತಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಡಿಸೆಂಬರ್ 30ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಇದಕ್ಕಾಗಿ ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ.
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯವು ನಾಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ನಡೆಯಲಿದ್ದು, ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತೆರೆಯಲಾದ ಮತ ಎಣಿಕೆ ಕೇಂದ್ರಕ್ಕಿಂದು ಭೇಟಿ ನೀಡಿ, ಮತ ಎಣಿಕೆ ಕಾರ್ಯಕ್ಕಾಗಿ ಕೈಗೊಳ್ಳಲಾದ ಅಗತ್ಯ ಸಿದ್ಧತೆ ಪರಿಶೀಲಿಸಿ ಅವರು ಮಾತನಾಡಿದರು. UNI