Home ಬೆಂಗಳೂರು ನಗರ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಮುಜಾವರ್ ನೇಮಕ ವಿವಾದದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಮುಜಾವರ್ ನೇಮಕ ವಿವಾದದ ಆದೇಶ ರದ್ದುಪಡಿಸಿದ ಹೈಕೋರ್ಟ್

49
0
Karnataka High Court

ಬೆಂಗಳೂರು:

ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜಾ ಕೈಂಕರ್ಯ ನೆರವೇರಿಸಲು ಮುಜಾವರ್ ನೇಮಕ ಮಾಡಿ 2018ರ ಮಾರ್ಚ್ 19ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಮಂಗಳವಾರ ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

“ಪ್ರಕರಣವನ್ನು ಹೊಸದಾಗಿ ಪರಿಗಣಿಸಿ, ಕಾನೂನಿನ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುತ್ತಿದ್ದೇನೆ. ಉನ್ನತಮಟ್ಟದ ಸಮಿತಿಯ ವರದಿಯ ಬಗ್ಗೆ ಯಾವುದೇ ಉಲ್ಲೇಖ ಮಾಡಲಾಗಿಲ್ಲ” ಎಂದು ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ನೇತೃತ್ವದ ಏಕಸದಸ್ಯ ಪೀಠವು ತೀರ್ಪಿನಲ್ಲಿ ಹೇಳಿದೆ.

ಇಲ್ಲಿ ಓದಿ: ದತ್ತ ಪೀಠ ವಿಚಾರದಲ್ಲಿ ಹಿಂದುಗಳ ನಂಬಿಕೆಗೆ ಪೂರಕವಾದ ಹೈಕೋರ್ಟ್ ತೀರ್ಪು: ಸಿ.ಟಿ.ರವಿ

ದತ್ತಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್ ಅವರನ್ನು ನೇಮಕ ಮಾಡಿ 2018ರ ಮಾರ್ಚ್ 19ರಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ 2018ರ ಏಪ್ರಿಲ್ನಲ್ಲಿ ಹೈಕೋರ್ಟ್ಗೆ ತಕರಾರು ಮನವಿ ಸಲ್ಲಿಸಿತ್ತು. ಅರ್ಜಿ ಕುರಿತು ಸುದೀರ್ಘ ವಾದ-ಪ್ರತಿವಾದ ಆಲಿಸಿ, ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ 2021ರ ಆಗಸ್ಟ್ ತಿಂಗಳಲ್ಲಿ ತೀರ್ಪು ಕಾಯ್ದಿರಿಸಿತ್ತು.

Powered By EmbedPress

ಅರ್ಜಿ ವಿಚಾರಣಾ ಹಂತದಲ್ಲಿದ್ದಾಗಲೇ ಮಾರ್ಚ್ 19ರ ಆದೇಶ ಸಂಬಂಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರ ನೀಡಿದ್ದ ಮುಚ್ಚಳಿಕೆ ಆಧರಿಸಿ, ದತ್ತ ಪೀಠದ ಪೂಜಾ ವಿಧಿ ವಿಧಾನದ ಬಗ್ಗೆ ಯಾವುದೇ ಆತುರದ ಕ್ರಮಕ್ಕೆ ಮುಂದಾಗದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿತ್ತು. ಈ ಆದೇಶವನ್ನು ಕಾಲ ಕಾಲಕ್ಕೆ ವಿಸ್ತರಿಸಿಕೊಂಡು ಬಂದಿತ್ತು.

ದತ್ತಪೀಠ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ ದಾಸ್ ನೇತೃತ್ವದ ಉನ್ನತಮಟ್ಟದ ಸಮಿತಿ ನೀಡಿರುವ ವರದಿ ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ. ಆ ವರದಿ ಆಧರಿಸಿ ರಾಜ್ಯ ಸರ್ಕಾರ ಮುಜಾವರ್ ನೇಮಕ ಮಾಡಿದೆ. ಹಿಂದೂಗಳ ಪೂಜಾಸ್ಥಳದ ಧಾರ್ಮಿಕ ಆಚರಣೆಗಳನ್ನು ಮುಜಾವರ್ಗಳು ನಡೆಸಿಕೊಡಬೇಕು ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ. ರಾಜ್ಯ ಸರ್ಕಾರದ ನಿರ್ಧಾರ ಹಿಂದೂಗಳ ಭಾವನೆಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

Also Read: Karnataka HC quashes order appointing mujawar as priest in Datta Gurupeetha, BJP says victory for Hindus

ಇಲ್ಲಿ ಓದಿ: ದತ್ತ ಪೀಠ ವಿಚಾರದಲ್ಲಿ ಸತ್ಯಕ್ಕೆ ಜಯ: ನಳಿನ್‍ಕುಮಾರ್ ಕಟೀಲ್ ಸಂತಸ

LEAVE A REPLY

Please enter your comment!
Please enter your name here