Home ಆರೋಗ್ಯ ಡೆಂಗಿ ಟೆಸ್ಟಿಂಗ್ ಗೆ 600 ರೂ ದರ ನಿಗದಿಪಡಿಸಿ ಆದೇಶ ಹೊರಡಿಸಿದ ಕರ್ನಾಟಕ ಆರೋಗ್ಯ ಇಲಾಖೆ:...

ಡೆಂಗಿ ಟೆಸ್ಟಿಂಗ್ ಗೆ 600 ರೂ ದರ ನಿಗದಿಪಡಿಸಿ ಆದೇಶ ಹೊರಡಿಸಿದ ಕರ್ನಾಟಕ ಆರೋಗ್ಯ ಇಲಾಖೆ: NS1 ಹಾಗೂ Igm ಟೆಸ್ಟಿಂಗ್ ಗೆ ತಲಾ 300 ರೂ ದರ ನಿಗದಿ

14
0

ಬೆಂಗಳೂರು: ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗಿ‌ ಜ್ವರ ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗಿ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಕೂಡ ಮನಬಂದಂತೆ ಡೆಂಗಿ ಟೆಸ್ಟಿಂಗ್ ಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಗಿ ಟೆಸ್ಟಿಂಗ್ ಗೆ ದರ ನಿಗದಿಪಡಿಸಿದೆ.

Screenshot 2024 07 04 09 59 41 47 e2d5b3f32b79de1d45acd1fad96fbb0f

ಎರಡು ರೀತಿಯ ಟೆಸ್ಟಿಂಗ್ ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್ ಗಳಿಗೆ ತಲಾ 300 ರೂ ಗಳನ್ನ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಗಿ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ.

LEAVE A REPLY

Please enter your comment!
Please enter your name here