Home High Court/ಹೈಕೋರ್ಟ್ Karnataka High Court adjourned hearing of CBI, Yatnal petition against Deputy Chief...

Karnataka High Court adjourned hearing of CBI, Yatnal petition against Deputy Chief Minister DK Shivakumar to February 29| ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ, ಯತ್ನಾಳ್ ಅರ್ಜಿ ವಿಚಾರಣೆ ಫೆ.29ಕ್ಕೆ ಮುಂದೂಡಿದ ಹೈಕೋರ್ಟ್

18
0
Congress party is like ocean, party will not be lost no matter who goes: DK Shivakumar

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ, ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಫೆ, 29ಕ್ಕೆ ಮುಂದೂಡಿದೆ.

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸರಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಡಿ.ಕೆ ಶಿವಕುಮಾರ್ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅವರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಉಮೇಶ್ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ತಿಳಿಸಿದರು.

ರಾಜ್ಯ ಸರಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಈ ಮಧ್ಯೆ, ಲೋಕಾಯುಕ್ತ ಎಡಿಜಿಟಿ ಮಧ್ಯಪ್ರವೇಶಿಕ್ಕೆ ಕೋರಿರುವ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಲೋಕಾಯುಕ್ತದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟೇಶ್ ಅರಬಟ್ಟಿ ಅವರಿಗೆ ನೋಟಿಸ್ ಪಡೆಯಲು ಸೂಚಿಸಲಾಗಿದೆ.

ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ ಅವರಿಗೆ ಅರ್ಜಿಯಲ್ಲಿ ಆಕ್ಷೇಪಣೆಗಳನ್ನು ಸರಿಪಡಿಸಲು ನ್ಯಾಯಾಲಯ ಸೂಚಿಸಿತು. ಆಕ್ಷೇಪಣೆ, ಪ್ರತ್ಯುತ್ತರ ಸಲ್ಲಿಸಲು ಕಾಲಾವಕಾಶ ನೀಡಿ, ವಿಚಾರಣೆಯನ್ನು ಫೆಬ್ರವರಿ 29ಕ್ಕೆ ಮುಂದೂಡಿತು.

LEAVE A REPLY

Please enter your comment!
Please enter your name here