ಬೆಂಗಳೂರು:
ಕರ್ನಾಟಕ ಉಚ್ಛನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಅಲಹಾಬಾದ್ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿದ್ದ, ಗೌರವಾನ್ವಿತ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರು ದಿನಾಂಕ 11-10-2021ರಂದು ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿದ್ದರು.
ಕರ್ನಾಟಕ ಉಚ್ಛನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳನ್ನು ಇಂದು ಕರ್ನಾಟಕ ಉಚ್ಛ ನ್ಯಾಯಾಲಯದ ಕೋರ್ಟ್ ಹಾಲ್ 1ರಲ್ಲಿ ಹಮ್ಮಿಕೊಂಡಿದ್ದ ಸರಳ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್‍ನ ಅಧ್ಯಕ್ಷರಾದ ಎನ್. ಶ್ರೀನಿವಾಸಬಾಬು ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಸಮಾರಂಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಉಪಸ್ಥಿತರಿದ್ದರು.