Home High Court/ಹೈಕೋರ್ಟ್ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಜಾಮೀನು

ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಜಾಮೀನು

18
0
Advocate Devarajegowda

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ವಕೀಲ ದೇವರಾಜೇಗೌಡಗೆ ಜಾಮೀನು ನೀಡಿ ಹೈಕೋರ್ಟ್ ಆದೇಶಿದೆ.

ಜಾಮೀನು ಕೋರಿ ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶಿಸಿದೆ.

ದೇವರಾಜೇಗೌಡ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂದೆ ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ದೇವರಾಜೇಗೌಡರನ್ನು ನ್ಯಾಯಾಂಗ ಬಂಧನಕ್ಕೆ ಈ ಹಿಂದೆ ವಹಿಸಿತ್ತು. ಇದನ್ನು ಪ್ರಶ್ನಿಸಿ ದೇವರಾಜೇಗೌಡ ಅವರು ಹೈಕೊರ್ಟ್ ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. 

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು.

LEAVE A REPLY

Please enter your comment!
Please enter your name here