ಬೆಂಗಳೂರು:
ಆಸ್ತಿಗಳ ಖಾತೆ ಕೋರಿ ಸಲ್ಲಿಸುವ ಅರ್ಜಿಗಳ ಕುರಿತ ಮಾಹಿತಿ ವೆಬ್ ಹೋಸ್ಟಿಂಗ್‌ಗೆ ಹೈಕೋರ್ಟ್ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರ ನೇತೃತ್ವದ ಕಲಬುರಗಿ ಪೀಠ ಈ ಆದೇಶ ನೀಡಿದೆ. ಖಾತೆಗಾಗಿ ಸಲ್ಲಿಸಿರುವ ಕುರಿತು ಎಲ್ಲಾ ಸಂಬಂಧಿತ ನಗರಸಭೆಗಳು (ಸಿಟಿ ಮುನ್ಸಿಪಲ್ ಕೌನ್ಸಿಲ್) ತಮ್ಮ ವೆಬ್‌ಸೈಟ್‌ನಲ್ಲಿ ವೆಬ್ ಹೋಸ್ಟ್ ಮಾಡಬೇಕು ಎಂದು ಸೂಚನೆ ನೀಡಿದೆ. ಜತೆಗೆ, ಸಾರ್ವಜನಿಕರು ಭೌತಿಕ ಅಥವಾ ಡಿಜಿಟಲ್ ಮಾದರಿಯಲ್ಲಿ ಖಾತೆ ಕೋರಿ ಅರ್ಜಿ ಸಲ್ಲಿಸಿದಾಗ ಅದನ್ನು ಕರ್ನಾಟಕ ಸಕಾಲ ಸೇವೆಗಳ ಕಾಯಿದೆ 2011ರ ಅಡಿ 30 ದಿನಗಳ ಒಳಗೆ ಪರಿಗಣಿಸಬೇಕು.
ಅಷ್ಟೇ ಅಲ್ಲದೆ ಖಾತೆ ಮಾಡಿಕೊಡುವಂತೆ ಕೋರಿ ಭೌತಿಕ ಅಥವಾ ಡಿಜಿಟಲ್ ಮಾದರಿಯಲ್ಲಿ ಸಲ್ಲಿಸುವ ಅರ್ಜಿಗಳ ಮಾಹಿತಿ, ಅರ್ಜಿ ಸ್ವೀಕರಿಸಿದ ದಿನಾಂಕ, ಆ ಅರ್ಜಿಗೆ ಸಂಬಂಧಿಸಿದಂತೆ ಏನೆಲ್ಲಾ ಬೆಳವಣಿಗೆಯಾಗಿದೆ ಎಂಬ ಮಾಹಿತಿಯನ್ನು ರಾಜ್ಯದಾದ್ಯಂತ ಇರುವ ಸಂಬಂಧಿತ ನಗರಸಭೆಗಳು ತಮ್ಮ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಅಗತ್ಯವಾದ ವೆಬ್‌ಹೋಸ್ಟ್ ಮಾಡುವ ವ್ಯವಸ್ಥೆಯನ್ನು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮತ್ತು ಪೌರಾಡಳಿತ ಇಲಾಖೆಯ ನಿರ್ದೇಶಕರು ರೂಪಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.